ಮುಂಬೈ

ಎನ್‌ಸಿಪಿ ಬೆಂಬಲದೊಂದಿಗೆ ಸರ್ಕಾರ ರಚಿಸಲು ಶಿವಸೇನಾ ಸಿದ್ಧ.

Pinterest LinkedIn Tumblr

ಮುಂಬೈ: ಮಹಾರಾಷ್ಟ್ರದಲ್ಲಿ ಕಾಂಗ್ರೆಸ್, ಎನ್‌ಸಿಪಿ ಬೆಂಬಲದೊಂದಿಗೆ ಸರ್ಕಾರ ರಚಿಸಲು ಶಿವಸೇನಾ ಮುಂದಾಗಿದೆ.

ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಜತೆ ಮಾತುಕತೆ ನಡೆಸಿದ ಬಳಿಕ ಸರ್ಕಾರ ರಚನೆ ತೀರ್ಮಾನಕ್ಕೆ ಬರಲಾಗಿದೆ. ಉಭಯ ಪ್ರಮುಖರ ಮಧ್ಯೆ ಮಾತುಕತೆ ನಡೆಯುವಲ್ಲಿ ಎನ್‌ಸಿಪಿ ಅಧ್ಯಕ್ಷ ಶರದ್‌ ಪವಾರ್ ಪ್ರಮುಖ ಪಾತ್ರವಹಿಸಿದ್ದಾರೆ ಎನ್ನಲಾಗಿದೆ.

ಏಕನಾಥ್ ಶಿಂದೆ ಮತ್ತು ಆದಿತ್ಯ ಠಾಕ್ರೆ ನೇತೃತ್ವದ ಶಿವಸೇನಾ ನಿಯೋಗವು ಮಹಾರಾಷ್ಟ್ರದ ರಾಜ್ಯಪಾಲ ಭಗತ್‌ ಸಿಂಗ್‌ ಕೋಶಿಯಾರಿ ಅವರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದೆ.

ವಿಧಾನಸಭೆ ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಬಿಜೆಪಿಗೆ ಸರ್ಕಾರ ರಚಿಸುವಂತೆ ರಾಜ್ಯಪಾಲರು ಭಾನುವಾರ ಆಹ್ವಾನ ನೀಡಿದ್ದರು. ಆದರೆ, ಮಿತ್ರ ಪಕ್ಷದ ಬೆಂಬಲ ದೊರೆಯದ ಹಿನ್ನೆಲೆಯಲ್ಲಿ ಸರ್ಕಾರ ರಚಿಸುವುದಿಲ್ಲ ಎಂದು ಬಿಜೆಪಿ ಹೇಳಿತ್ತು. ಬಳಿಕ ರಾಜ್ಯಪಾಲರು ಶಿವಸೇನಾಗೆ ಆಹ್ವಾನ ನೀಡಿದ್ದಾರೆ.

Comments are closed.