ಮುಂಬೈ: ಮಾರಕ ಕೊರೋನಾ ವೈರಸ್ ಗೆ ಮಹಾರಾಷ್ಟ್ರ ತತ್ತರಿಸಿ ಹೋಗಿದ್ದು, ಇಂದು ಒಂದೇ ದಿನದಲ್ಲಿ 25 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 97ಕ್ಕೆ ಏರಿಕೆಯಾಗಿದೆ.
ಅಂತೆಯೇ ಮಹಾರಾಷ್ಟ್ರದಲ್ಲಿ ಇಂದು 229 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ರಾಜ್ಯದಲ್ಲಿ ವೈರಸ್ ಸೋಂಕಿತರ ಸಂಖ್ಯೆ 1,364ಕ್ಕೆ ಏರಿಕೆಯಾಗಿದೆ. ವಾಣಿಜ್ಯ ರಾಜಧಾನಿ ಮುಂಬೈ ಮಹಾನಗರಿಯೊಂದರಲ್ಲೇ ಇಂದು 79 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ಮುಂಬೈನಲ್ಲಿ ಸೋಂಕಿತರ ಸಂಖ್ಯೆ 775ಕ್ಕೆ ಏರಿಕೆಯಾಗಿದೆ. ಅಂತೆಯೇ ಇಲ್ಲಿ ಇಂದು 9 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಮುಂಬೈನಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 65ಕ್ಕೆ ಏರಿಕೆಯಾಗಿದೆ. ಅಂತೆಯೇ 6 ಮಂದಿ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದು, ಆ ಮೂಲಕ ಮುಂಬೈನಲ್ಲಿ ಕೊರೋನಾ ವೈರಸ್ ನಿಂದ ಗುಣಮುಖರಾದವರ ಸಂಖ್ಯೆ 65ಕ್ಕೆ ಏರಿಕೆಯಾಗಿದೆ ಎಂದು ಬಿಎಂಸಿ ತಿಳಿಸಿದೆ.
ಪುಣೆಯಲ್ಲಿ ಒಂದೇ ದಿನ 14 ಮಂದಿ ಸೋಂಕಿತರ ಸಾವು
ಮುಂಬೈ ಬಳಿಕ ಕೊರೋನಾ ವೈರಸ್ ಗೆ ಮಹಾರಾಷ್ಟ್ರದಲ್ಲಿ ತೀವ್ರ ಹೊಡೆತಕ್ಕೆ ಸಿಕ್ಕ ಜಿಲ್ಲೆಯೆಂದರೆ ಅದು ಪುಣೆ. ಪುಣೆಯಲ್ಲಿ ಇಂದು ಒಂದೇ ದಿನ 14 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಉಳಿದಂತೆ ಮಾಲೆಗಾಂವ್ ಮತ್ತು ರತ್ನಗಿರಿಯಲ್ಲಿ ತಲಾ ಒಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
Comments are closed.