ಮುಂಬೈ: ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕ ಸೋಂಕಿನಿಂದ ತತ್ತರಿಸಿ ಹೋಗಿರುವ ಮಹಾರಾಷ್ಟ್ರದಲ್ಲಿ ಒಂದೇ ದಿನ 3254 ಹೊಸ ಪಾಸಿಟಿವ್ ಪ್ರಕರಣ ದಾಖಲಾಗಿದೆ.
ಹೌದು ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಾದ್ಯತ 3254 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 94,041ಕ್ಕೆ ಏರಿಕೆಯಾಗಿದೆ.
ಇನ್ನು ಮಹಾರಾಷ್ಟ್ರದಲ್ಲಿ ಒಟ್ಟು ಇಂದು 149 ಮಂದಿ ಕೊರೋನಾ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಮಹಾರಾಷ್ಟ್ರದಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 3438ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದಲ್ಲಿ ಇಂದು ಒಂದೇ ದಿನ 1879 ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಈ ವರೆಗೂ 44,517 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. 49,524 ಸಕ್ರಿಯ ಪ್ರಕರಣಗಳಿವೆ.
Comments are closed.