ಬೆಂಗಳೂರು: 2015ನೇ ಸಾಲಿನ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ಹೈಕೋರ್ಟ್ ಏಕಸದಸ್ಯ ಪೀಠ ಬುಧವಾರ ತಡೆ ನೀಡಿದ್ದು, ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರನ್ನು ಪ್ರಸಕ್ತ ಸಾಲಿನ ಖೇಲ್ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ನಿಯಮಾವಳಿಗೆ ವಿರುದ್ಧವಾಗಿದೆ ಎಂದು ಆರೋಪಿಸಿ ಅಂತಾರಾಷ್ಟ್ರೀಯ ಪ್ಯಾರಾಲಿಂಪಿಕ್ ಕ್ರೀಟಾಪಟು ಬೆಂಗಳೂರಿನ ಎಚ್.ಎನ್.ಗಿರೀಶ್ ಅವರು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬೋಪಣ್ಣ ಅವರಿದ್ದ ಏಕಸದಸ್ಯ ಪೀಠ, ಪ್ರಶಸ್ತಿಗೆ ತಡೆ ನೀಡಿ, ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಅಲ್ಲದೆ ಹೈಕೋರ್ಟ್ ಅಂತಿಮ ತೀರ್ಪಿಗೆ ಪ್ರಶಸ್ತಿ ಒಳಪಟ್ಟಿರುತ್ತದೆ ಎಂದು ಆದೇಶ ನೀಡಿದೆ.
ನಾನು ಸಾನಿಯಾ ಅವರಿಗಿಂತ ಹೆಚ್ಚು ಸಾಧನೆ ಮಾಡಿದ್ದು, ಪ್ರಶಸ್ತಿ ಪಡೆಯಲು ಸಾನಿಯಾಗಿಂತ ಹೆಚ್ಚಿನ ಅರ್ಹತೆ ಇದೆ ಎಂದು ಗಿರೀಶ್ ಪರ ವಕೀಲ ಎಂ.ಎಸ್. ಶ್ಯಾಮಸುಂದರ್ ವಾದಿಸಿದ್ದಾರೆ.a