ಮುಂಬೈ (ಪಿಟಿಐ): ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು 2002ರಲ್ಲಿ ಅಪಘಾತ ನಡೆಸಿ ಪರಾರಿಯಾಗಿರುವ ಪ್ರಕರಣದ ತೀರ್ಪನ್ನು ಬಾಂಬೆ ಹೈಕೋರ್ಟ್ ಗುರುವಾರ ಪ್ರಕಟಿಸಿದ್ದು , ಸಲ್ಮಾನ್ ಖಾನ್ ಅವರನ್ನು ಖುಲಾಸೆಗೊಳಿಸಿದೆ.
ಜೈಲು ವಾಸದ ಭೀತಿ ಅನುಭವಿಸುತ್ತಿದ್ದ ಸಲ್ಮಾನ್ ಖಾನ್ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಅವರ ಮೇಲಿನ ಎಲ್ಲ ಆರೋಪಗಳನ್ನು ನ್ಯಾಯಾಲಯ ವಜಾ ಮಾಡಿದೆ.
‘ಸಲ್ಮಾನ್ ಖಾನ್ ಅವರು ಮದ್ಯದ ಅಮಲಿನಲ್ಲಿ ಕಾರು ಓಡಿಸುತ್ತಿದ್ದರು ಎಂಬುದನ್ನು ಅನುಮಾನಕ್ಕೆ ಎಡೆ ಇಲ್ಲದಂತೆ ಸಾಬೀತು ಮಾಡುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಮುಂಬೈ ಸೆಷನ್ಸ್ ನ್ಯಾಯಾಲಯವು ಮೇ 6ರಂದು ಸಲ್ಮಾನ್ ತಪ್ಪಿತಸ್ಥ ಎಂದು ತೀರ್ಪು ನೀಡಿ ಐದು ವರ್ಷ ಶಿಕ್ಷೆ ವಿಧಿಸಿತ್ತು. ಅದನ್ನು ಪ್ರಶ್ನಿಸಿ ಸಲ್ಮಾನ್ ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಹೈಕೋರ್ಟ್ ಕಳೆದ ಮೂರು ದಿನಗಳಿಂದ ತೀರ್ಪಿನ ಉಕ್ತಲೇಖನ ಬರೆಯುತ್ತಿತ್ತು. ಇಂದು ನ್ಯಾಯಾಲಯದ ಅಂತಿಮ ತೀರ್ಪು ಹೊರ ಬಂದಿದೆ.