ಟಾಲಿವುಡ್ ಮೆಗಾ ಸ್ಟಾರ್ ಚಿರಂಜೀವಿ ಅವರ ಮನೆಯಲ್ಲಿ ಕಳ್ಳತನ ನಡೆದಿದೆ. ಹೈದರಾಬಾದಿನ ಜೂಬ್ಲಿ ಹಿಲ್ಸ್ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿರುವ ಅವರ ಮನೆಯಲ್ಲಿ ರೂ.2 ಲಕ್ಷ ನಗದು ಕಳುವಾಗಿದೆ.
ಈ ಹಿನ್ನೆಲೆಯಲ್ಲಿ ಚಿರಂಜೀವಿ ಮ್ಯಾನೇಜರ್ ಗಂಗಾಧರ್ ಸೋಮವಾರ ಪೊಲೀಸರಿಗೆ ದೂರು ನೀಡಿದ್ದಾರೆ. ಮ್ಯಾನೇಜರ್ ಕೊಟ್ಟ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನಿಖೆಯ ಭಾಗವಾಗಿ ಚಿರಂಜೀವಿ ಮನೆಗೆಲಸದ ಚೆನ್ನಯ್ಯ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಚಿರಂಜೀವಿ ಮನೆಯಲ್ಲಿ ಕೆಲ ಕಾಲದಿಂದ ಚೆನ್ನಯ್ಯ ಎಂಬುವವರು ಸರ್ವರ್ ಆಗಿ ಕೆಲಸ ಮಾಡುತ್ತಿದ್ದರು. ಹಾಗಾಗಿ ಅವರ ಮೇಲೆ ಅನುಮಾನಗೊಂಡಿದ್ದು ವಿಚಾರಣೆ ನಡೆಸಲಾಗುತ್ತಿದೆ. ಮನೆಯ ಸಮೀಪದ ಸಿಸಿ ಟಿವಿ ಕ್ಯಾಮೆರಾದಲ್ಲಿನ ಸನ್ನಿವೇಶಗಳನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ. ಈ ಘಟನೆಯ ಸಂಪೂರ್ಣ ವಿವರಗಳು ಇನ್ನಷ್ಟೇ ಹೊರಬೀಳಬೇಕು.
ಸದ್ಯಕ್ಕೆ ಸ್ವಾತಂತ್ರ್ಯ ಹೋರಾಟಗಾರ ಉಯ್ಯಾಲವಾಡ ನರಸಿಂಹ ರೆಡ್ಡಿ ಜೀವನ ಕಥೆಯಾಧಾರಿತ ಚಿತ್ರ ‘ಸೈರಾ’ದಲ್ಲಿ ಚಿರಂಜೀವಿ ಅಭಿನಯಿಸುತ್ತಿದ್ದಾರೆ. ಈ ಚಿತ್ರಕ್ಕೆ ಅವರ ಪುತ್ರ ರಾಮ್ ಚರಣ್ ನಿರ್ಮಾಪಕ. ಪಾತ್ರವರ್ಗದಲ್ಲಿ ಕಿಚ್ಚ ಸುದೀಪ್, ಅಮಿತಾಬ್ ಬಚ್ಚನ್, ವಿಜಯ್ ಸೇತ್ ಪತಿ, ನಯನತಾರಾ ಸೇರಿದಂತೆ ಮುಂತಾದವರಿದ್ದಾರೆ.
Comments are closed.