ಮನೋರಂಜನೆ

ರಹಸ್ಯವಾಗಿ ತನ್ನ ಗೆಳೆಯ ಆ್ಯಂಡ್ರಿ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶ್ರೇಯಾ ಶರಣ್

Pinterest LinkedIn Tumblr

ನವದೆಹಲಿ: ಭಾರತೀಯ ಚಿತ್ರರಂಗದ ಖ್ಯಾತ ನಟಿ ಶ್ರೇಯಾ ಶರಣ್ ತಮ್ಮ ರಷ್ಯನ್ ಗೆಳೆಯನ ಜತೆ ರಹಸ್ಯವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ ಎಂದು ವರದಿಯಾಗಿದೆ.

ಮಾರ್ಚ್ 12ರಂದು ಮುಂಬೈನ ತಮ್ಮ ನಿವಾಸದಲ್ಲಿ ಟೆನಿಸ್ ಆಟಗಾರ ಆ್ಯಂಡ್ರಿ ಕೊಸ್ಚೆಯೇವ್ ಜತೆ ಸಪ್ತಪದಿ ತುಳಿದಿದ್ದು ಮದುವೆಗೆ ಕೇವಲ ಕುಟುಂಬಸ್ಥರು ಮತ್ತು ತೀರ ಆಪ್ತವರ್ಗಕ್ಕೆ ಮಾತ್ರ ಆಹ್ವಾನ ನೀಡಿದ್ದಾರೆ.

ಹಿಂದೂ ಸಂಪ್ರದಾಯದಂತೆ ಶ್ರೇಯಾ ಶರಣ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು ಬಾಲಿವುಡ್ ನಟ ಮನೋಜ್ ಬಾಜಪೇಯಿ ಮತ್ತು ಅವರ ಪತ್ನಿ ಶಬಾನ ಅಜ್ಮಿ ಮಾತ್ರ ಸಮಾರಂಭದಲ್ಲಿ ಪಾಲ್ಗೊಂಡಿದ್ದರು ಎನ್ನಲಾಗಿದೆ.

2001ರಲ್ಲಿ ತೆಲುಗು ಚಿತ್ರ ಇಷ್ಟಂ ಮೂಲಕ ಬೆಳ್ಳಿ ತೆರೆಗೆ ಪಾದಾರ್ಪಣೆ ಮಾಡಿದರು. 2018ರಲ್ಲಿ ಬಿಡುಗಡೆಯಾಗಿದ್ದ ತೆಲುಗಿನ ಗಾಯತ್ರಿ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಇನ್ನು ಮೂರು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ..

Comments are closed.