ಮನೋರಂಜನೆ

ರಜನೀಕಾಂತ್ ಅಭಿನಯದ ಕಾಲಾ ಚಿತ್ರಕ್ಕೆ ರಾಜ್ಯಾದ್ಯಂತ ಭಾರೀ ವಿರೋಧ; ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ, ಹಲವು ಜಿಲ್ಲೆಗಳಲ್ಲಿ ಚಿತ್ರ ಪ್ರದರ್ಶನ ರದ್ದು

Pinterest LinkedIn Tumblr

ಬೆಂಗಳೂರು: ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಕಾಲಾ ಚಿತ್ರಕ್ಕೆ ರಾಜ್ಯಾದ್ಯಂತ ಭಾರೀ ವಿರೋಧ ಕಂಡುಬಂದಿದ್ದು ಕನ್ನಡ ಪರ ಸಂಘಟನೆಗಳು ಕಾಲಾ ಚಿತ್ರ ಪ್ರದರ್ಶನ ವಿರೋಧಿಸಿ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿವೆ.

ಬೆಂಗಳೂರಿನಲ್ಲಿ ನೂರಾರು ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಕಾಲಾ ಚಿತ್ರ ತೆರೆಕಾಣುತ್ತಿದ್ದ ಚಿತ್ರಮಂದಿರಗಳ ಮುಂದೆ ಪ್ರತಿಭಟನೆ ನಡೆಸಿ ಚಿತ್ರವನ್ನು ನೋಡದಂತೆ ಅಭಿಮಾನಿಗಳಿಗೆ ಮನವಿ ಮಾಡುತ್ತಿದ್ದಾರೆ. ಈ ವೇಳೆ ಹಲವು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಕನ್ನಡಪರ ಸಂಘಟನೆಗಳು ಪ್ರತಿಭಟನೆ ಹಿನ್ನೆಲೆಯಲ್ಲಿ ಮಲ್ಲೇಶ್ವರದ ಮಂತ್ರಿಮಾಲ್, ಓರಿಯನ್ ಮಾಲ್, ಗೋಪಾಲನ್ ಮಾಲ್ ಸೇರಿದಂತೆ ಪ್ರಮುಖ ಮಾಲ್ ಗಳಲ್ಲಿ ಚಿತ್ರ ಪ್ರದರ್ಶನ ರದ್ದಾಗಿದೆ ಎಂದು ತಿಳಿದುಬಂದಿದೆ. ಇನ್ನು ಮೈಸೂರಿನಲ್ಲೂ ಸಹ ಪ್ರತಿಭಟನಾಕಾರರ ಮನವಿಗೆ ಸ್ಪಂಧಿಸಿದ ಚಿತ್ರಮಂದಿರದ ಮಾಲೀಕರು ಚಿತ್ರವನ್ನು ರದ್ದು ಮಾಡಿದ್ದಾರೆ.

ತೀವ್ರ ವಿರೋಧದ ನಡುವೆಯೂ ಬಳ್ಳಾರಿಯ ರಾಧಿಕಾ ಚಿತ್ರಮಂದಿರದಲ್ಲಿ ಕಾಲಾ ಚಿತ್ರ ಪ್ರದರ್ಶನವಾಗುತ್ತಿದೆ. ಸದ್ಯಕ್ಕೆ ಕರ್ನಾಟಕದಲ್ಲಿ ಕಾಲಾ ಚಿತ್ರ ಪ್ರದರ್ಶನವಾಗುತ್ತಿರುವ ಮೊದಲ ಚಿತ್ರಮಂದಿರ.

ಕಾವೇರಿ ವಿಷಯವಾಗಿ ನಟ ರಜನಿಕಾಂತ್ ನೀಡಿದ ಹೇಳಿಕೆಯನ್ನು ಖಂಡಿಸಿ ಕನ್ನಡಪರ ಸಂಘಟನೆಗಳು ಕಾಲಾ ಚಿತ್ರ ಬಿಡುಗಡೆಗೆ ತಡೆಯೊಡ್ಡಿವೆ.

Comments are closed.