ಹೈದರಾಬಾದ್: ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಅವರು ತೆಲುಗಿನಲ್ಲಿ ನಟಿಸಿದ ‘ಡಿಯರ್ ಕಾಮ್ರೆಡ್’ ಚಿತ್ರದ ಟ್ರೈಲರ್ ನಲ್ಲಿ ನಟ ವಿಜಯ್ ದೇವರಕೊಂಡ ಜೊತೆ ಲಿಪ್ ಲಾಕ್ ಸೀನ್‍ನಲ್ಲಿ ನಟಿಸಿದ್ದರು. ಈ ಸೀನ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಟ್ರೋಲ್ ಮಾಡಲಾಗುತ್ತಿದೆ. ಇದರಿಂದ ಬೇಸರಗೊಂಡ ರಶ್ಮಿಕಾ ಟ್ರೋಲ್ ಮಾಡಿದವರಿಗೆ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಚಿತ್ರದಲ್ಲಿ ಈ ಸೀನ್ ಬೇಕೇಬೇಕು ಎಂದು ಹೇಳಿದ್ದರು. ಹಾಗಾಗಿ ನಾನು ನನ್ನ ಪಾತ್ರಕ್ಕೆ ನ್ಯಾಯ ಒದಗಿಸಲು ಕಿಸ್ಸಿಂಗ್ ಸೀನ್ ಮಾಡಿದೆ. ಲಿಪ್‍ಲಾಕ್ ಸೀನ್ ನೋಡಿ ಯಾವುದೇ ಸಿನಿಮಾದ ಬಗ್ಗೆ ನಿರ್ಧರಿಸಬಾರದು. ಜನರು ‘ಗೀತಾ ಗೋವಿಂದಂ’ ಚಿತ್ರವನ್ನು ನೋಡಿ ಮೆಚ್ಚಿದ್ದಾರೆ. ಈ ಸಿನಿಮಾವನ್ನು ಕೂಡ ಮೆಚ್ಚಿಕೊಳ್ಳುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರಶ್ಮಿಕಾ ಮಂದಣ್ಣ ಜೊತೆ ವಿಜಯ್ ದೇವರಕೊಂಡ ಅವರನ್ನು ಕೂಡ ಜನರು ಟ್ರೋಲ್ ಮಾಡುತ್ತಿದ್ದಾರೆ. ವಿಜಯ್ ‘ಅರ್ಜುನ್ ರೆಡ್ಡಿ’ ಚಿತ್ರದಿಂದ ಎಲ್ಲ ಚಿತ್ರದಲ್ಲಿ ಲಿಪ್‍ಲಾಕ್ ಸೀನ್ ಮಾಡುತ್ತಿದ್ದಾರೆ. ವಿಜಯ್ ಟಾಲಿವುಡ್ ಇಮ್ರಾನ್ ಹಶ್ಮಿ ಆಗಿದ್ದಾರೆ ಎಂದು ಟ್ರೋಲ್ ಮಾಡಲಾಗುತ್ತಿದೆ.
ಡಿಯರ್ ಕಾಮ್ರೆಡ್ ಚಿತ್ರ ಭರತ್ ಕಾಮಾ ನಿದೇಶನದಲ್ಲಿ ಮೂಡಿ ಬಂದಿದ್ದು, ನವೀನ್ ಯೆರನೆನಿ, ವೈ.ರವಿಶಂಕರ್, ಮೋಹನ್ ಮತ್ತು ಯಶ್ ರಂಗಿನೇನಿ ಜಂಟಿಯಾಗಿ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ. ಜಸ್ಟಿನ್ ಪ್ರಭಾಕರನ್ ಅವರ ಸಂಗೀತದಲ್ಲಿ ಹಾಡುಗಳು ಮೂಡಿ ಬಂದಿದ್ದು, ಟೀಸರ್ ಲಹರಿ ಮ್ಯೂಸಿಕ್ ಯೂಟ್ಯೂಬ್ ಖಾತೆಯಲ್ಲಿ ನೋಡಬಹುದು.
ಟ್ರೋಲ್ ಮಾಡಿದ್ದು ಯಾಕೆ?:
ರಶ್ಮಿಕಾ ಈ ಮೊದಲು ವಿಜಯ್ ಜೊತೆ ‘ಗೀತಾ ಗೋವಿಂದಂ’ ಚಿತ್ರದಲ್ಲಿ ಕಿಸ್ಸಿಂಗ್ ಸೀನ್‍ನಲ್ಲಿ ನಟಿಸಿದ್ದರು. ಇದಾದ ಬಳಿಕ ಈಗ ಮತ್ತೆ ವಿಜಯ್ ಜೊತೆ ‘ಡಿಯರ್ ಕಾಮ್ರೆಡ್’ ಟ್ರೈಲರ್ ನಲ್ಲೂ ಕಿಸ್ಸಿಂಗ್ ಸೀನ್ ಮಾಡಿದ್ದಾರೆ. ಹಾಗಾಗಿ ಜನರು ಸಾಮಾಜಿಕ ಜಾಲತಾಣದಲ್ಲಿ ಅವರ ಚಾರಿತ್ರ್ಯದ ಬಗ್ಗೆ ಕೆಟ್ಟದಾಗಿ ಮಾತನಾಡಲು ಶುರು ಮಾಡಿದ್ದರು.
Comments are closed.