ವಿರಾಜಪೇಟೆ: ನಟಿ ರಶ್ಮಿಕಾ ಮಂದಣ್ಣ ಅವರಿಗೆ ಗುರುವಾರ ಮುಂಜಾನೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದು, ಅವರ ವಿರಾಜಪೇಟೆಯ ಮನೆ ಮೇಲೆ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.
ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರ ನಿವಾಸಕ್ಕೆ ಇಂದು ಮುಂಜಾನೆ ಸುಮಾರು 7.30ರ ವೇಳೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.
ಐಟಿ ಅಧಿಕಾರಿಗಳು ಖಾಸಗಿ ಟ್ಯಾಕ್ಸಿ ಮೂಲಕ ರಶ್ಮಿಕಾ ಮಂದಣ್ಣ ಮನೆಗೆ ಆಗಮಿಸಿದ್ದರು. ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ರಶ್ಮಿಕಾ ಸದ್ಯ ವಿರಾಜಪೇಟೆಯ ಮನೆಯಲ್ಲಿಲ್ಲ ಎನ್ನಲಾಗಿದೆ.
2016ರಲ್ಲಿ ರಕ್ಷಿತ್ ಶೆಟ್ಟಿ ಅವರ ‘ ಕಿರಿಕ್ ಪಾರ್ಟಿ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದ ರಶ್ಮಿಕಾ ನಂತರ ತೆಲುಗು ಚಿತ್ರರಂಗದಲ್ಲಿ ದೊಡ್ಡ ಹೆಸರು ಮಾಡಿದ್ದಾರೆ.
Comments are closed.