ಮನೋರಂಜನೆ

‘ಕೋವಿಡ್ 19’ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 50 ಲಕ್ಷ ರೂಪಾಯಿ ದೇಣಿಗೆ ನೀಡಿದ ನಟ ಪುನೀತ್ ರಾಜ್ ಕುಮಾರ್

Pinterest LinkedIn Tumblr

ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಕೋವಿಡ್ 19 ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 50 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ.

ಅವರು ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಪರಿಹಾರ ಮೊತ್ತದ ಚೆಕ್ ಹಸ್ತಾಂತರಿಸಿದರು. ಕೊರೋನಾ ವಿರುದ್ಧ ಹೋರಾಡಲು, ರಾಜ್ಯದ ಬಡವರು, ನಿರ್ಗತಿಕರಿಗೆ ಸಹಾಯ, ವ್ಯವಸ್ಥೆ ಮಾಡಲು ಶ್ರೀಮಂತ ನಾಗರಿಕರು, ಕೈಗಾರಿಕೋದ್ಯಮಿಗಳು, ಕಾರ್ಪೊರೇಟ್ ಉದ್ಯಮಿಗಳು ಸರ್ಕಾರದ ಜತೆ ಕೈಜೋಡಿಸಿ, ಧನಸಹಾಯ ಮಾಡಿ ಎಂದು ಮುಖ್ಯಮಂತ್ರಿ ಕೇಳಿಕೊಂಡಿದ್ದರು.

ಅದರಂತೆ ಹಲವರು ತಮ್ಮದೇ ಆದ ರೀತಿಯಲ್ಲಿ ಸಹಾಯ ಮಾಡುತ್ತಿದ್ದು, ಹಲವು ಚಲನಚಿತ್ರ ಕಲಾವಿದರು ಕೂಡ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ.

Comments are closed.