ಮನೋರಂಜನೆ

ಆಗಸ್ಟ್‌ನಲ್ಲಿ ಡಿಕೆಶಿ ಪುತ್ರಿಯ ಜೊತೆ ಎಸ್‌ಎಂ ಕೃಷ್ಣ ಮೊಮ್ಮಗನ ನಿಶ್ಚಿತಾರ್ಥ

Pinterest LinkedIn Tumblr


ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಮಗಳಿಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಮೊಮ್ಮಗನಿಗೂ ಮದುವೆ ನಿಶ್ಚಯವಾಗಿದೆ. ಸೋಮವಾರ ಡಿಕೆಶಿ ನಿವಾಸದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಹಾರ ಬದಲಿಸಿಕೊಳ್ಳುವ ಮೂಲಕ ಮದುವೆ ನಿಶ್ಚಯ ಮಾಡಿಕೊಳ್ಳಲಾಗಿದೆ.

ಈ ಕಾರ್ಯಕ್ರಮಕ್ಕಾಗಿ ಡಿಕೆ ಶಿವಕುಮಾರ್ ಅವರ ಮನೆಗೆ ಎಂಸ್ ಕೃಷ್ಣ ಅವರ ಕುಟುಂಬ ಆಗಮಿಸಿತ್ತು. ಮೂರು ದಿನಗಳ ಹಿಂದೆಯಷ್ಟೇ ಎಸ್‍ಎಂಕೆ ನಿವಾಸಕ್ಕೆ ಡಿಕೆಶಿ ಕುಟುಂಬ ತೆರಳಿತ್ತು. ಇದೀಗ ಗುರು-ಹಿರಿಯರ ಸಮ್ಮಖದಲ್ಲಿ ದಿವಂಗತ ಸಿದ್ಧಾರ್ಥ ಅವರ ಪುತ್ರ ಅಮರ್ಥ್ಯ ಸುಬ್ರಮಣ್ಯ ಹಾಗೂ ಡಿಕೆಶಿ ಪುತ್ರಿ ಐಶ್ವರ್ಯ ವಿವಾಹ ನಿಶ್ಚಯಿಸಿಕೊಳ್ಳಲಾಗಿದೆ.

ಇದೇ ತಿಂಗಳ 12ರಂದು ಡಿ.ಕೆ.ಶಿವಕುಮಾರ್ ಕುಟುಂಬದವರು ಸದಾಶಿವನಗರದ ಎಸ್.ಎಂ.ಕೃಷ್ಣ ನಿವಾಸಕ್ಕೆ ತೆರಳಿ ಮದುವೆ ಮಾತುಕತೆ ನಡೆಸಿದ್ದರು. ಕಳೆದ ಒಂದು ತಿಂಗಳಿಂದಲೂ ಡಿಕೆಶಿ ಪುತ್ರಿ ಐಶ್ವರ್ಯ ಹಾಗೂ ಉದ್ಯಮಿ ಸಿದ್ದಾರ್ಥ್ ಪುತ್ರ ಅಮರ್ಥ್ಯ ಸುಬ್ರಮಣ್ಯ ವಿವಾಹ ಸಂಬಂಧ ಎರಡು ಕುಟುಂಬಗಳು ಮಾತುಕತೆ ನಡೆಸುತ್ತಲೇ ಇದ್ದವು. ಆದರೆ ಸೋಮವಾರ ಡಿಕೆಶಿ ನಿವಾಸದಲ್ಲೇ ನಡೆದ ಸರಳ ಕಾರ್ಯಕ್ರಮದಲ್ಲಿ ಹಾರವನ್ನು ಬದಲಿಸುವ ಮೂಲಕ ಮದುವೆ ನಿಶ್ಚಯ ಮಾಡಿಕೊಂಡಿದ್ದಾರೆ.

ಈಗ ಕೇವಲ ಮದುವೆ ನಿಶ್ಚಯವಾಗಿದ್ದು, ಎರಡು ಕುಟುಂಬಗಳು ತಾಂಬೂಲ ಬದಲಿಸಿಕೊಂಡಿವೆ. ಆಷಾಢ ಕಳೆದ ನಂತರ ಆಗಸ್ಟ್ ತಿಂಗಳಲ್ಲಿ ನಿಶ್ಚಿತಾರ್ಥ ನಡೆಸುವ ಸಂಬಂಧ ಮಾತುಕತೆ ನಡೆದಿದೆ. ಆಗಸ್ಟ್ ತಿಂಗಳಿನಲ್ಲಿ ಒಳ್ಳೆಯ ದಿನ ನೋಡಿ ನಿಶ್ಚಿತಾರ್ಥದ ದಿನಾಂಕ ನಿಗದಿ ಆಗಲಿದೆ. ಬಹುತೇಕ ಡಿಸೆಂಬರ್‌ನಲ್ಲಿ ಮದುವೆ ದಿನಾಂಕ ನಿಗದಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Comments are closed.