ಬಾಲಿವುಡ್ನಲ್ಲಿ ಖ್ಯಾತ ನಟ ಅಮಿತಾಭ್ ಬಚ್ಚನ್ ಹಾಗೂ ಮಗ ಅಭಿಷೇಕ್ ಬಚ್ಚನ್ ಅವರಿಗೆ ಕೋರೋನಾ ಸೋಂಕು ಇರುವುದು ದೃಢಪಟ್ಟಿದೆ. ಅದರ ಬೆನ್ನಲ್ಲೇ ಪತ್ನಿ ಐಶ್ವರ್ಯಾ ರೈ ಹಾಗೂ ಮಗಳು ಆರಾಧ್ಯಾ ರೈ ಅವರಿಗೆ ಕೋವಿಡ್ ಸೋಂಕು ತಗುಲಿರುವುದು ಖಚಿತವಾಗಿದೆ. ಈ ಸುದ್ದಿ ಹೊರಬಂದಂತೆ ಬಾಲಿವುಡ್ನಲ್ಲಿ ಆತಂಕ ಮನೆಮಾಡಿದೆ. ಇದೀಗ ಸ್ಯಾಂಡಲ್ವುಡ್ನಲ್ಲೂ ಕೊರೋನಾ ಪ್ರಕರಣಗಳು ಒಂದೊಂದಾಗಿ ಹೊರ ಬರುತ್ತಿದೆ. ಚಿತ್ರನಟ ನೆನಪಿರಲಿ ಪ್ರೇಮ್ ಅವರ ತಾಯಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಟ ಪ್ರೇಮ್ ಅವರ ತಾಯಿಗೆ 65 ವರ್ಷ ವಯಸ್ಸಾಗಿದ್ದು, ಕಾಮಾಕ್ಷಿ ಪಾಳ್ಯದಲ್ಲಿ ನೆಲೆಸಿದ್ದರು. ಕೆಲ ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದರು. ಹಾಗಾಗಿ ಅವರನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ಕೊರೋನಾ ಟೆಸ್ಟ್ ಮಾಡಿಸಿದಾಗ ಕೋವಿಡ್-19 ಸೋಂಕು ಇರುವುದು ದೃಢಪಟ್ಟಿದೆ.
ಇತ್ತೀಚೆಗೆ ಕನ್ನಡದ ಕಿರುತೆರೆ ನಟಿ ನವ್ಯಾ ಸ್ವಾಮಿಗೆ ಕೊರೋನಾ ತಗಲಿತ್ತು. ತೆಲುಗು ಸಿರೀಯಲ್ನಲ್ಲಿ ತೊಡಗಿಸಿಕೊಂಡಿರುವ ಕನ್ನಡತಿ ಕೊರೋನಾ ವೈರಾಣು ಸೋಂಕಿಗೆ ತುತ್ತಾಗಿದ್ದರಿಂದ ಚಿತ್ರೀಕರಣದಲ್ಲಿ ಪಾಲ್ಗೊಂಡ ಇತರರು ಆತಂಕಕ್ಕೀಡಾಗಿದ್ದರು. ನಟಿಯೊಂದಿಗೆ ಸಂಪರ್ಕದಲ್ಲಿದ್ದ ಉಳಿದವರು ಕೂಡ ಕೊರೋನಾ ಟೆಸ್ಟ್ ಮಾಡಿಸಿದ್ದರು. ಈ ವೇಳೆ ನವ್ಯಾ ಜೊತೆ ಅಭಿನಯಿಸಿದ್ದ ನಟ ರವಿಕೃಷ್ಣ ಅವರಿಗೂ ಕೋವಿಡ್-19 ವೈರಸ್ ತಗುಲಿರುವುದು ದೃಢಪಟ್ಟಿದೆ.
ಶ್ರೀನಗರ ಕಿಟ್ಟಿ ಸಹೋದರ ಜೂನ್ 29 ರಂದು ಕಾರ್ಡಿಯಾಕ್ ಅರೆಸ್ಟ್ ನಿಂದ ಮೃತ ಪಟ್ಟಿದ್ದರು.
ನಿಯಮದ ಪ್ರಕಾರ ಅವರನ್ನ ಕೋವಿಡ್ 19 ಟೆಸ್ಟ್ಗೆ ಒಳಪಡಿಸಲಾಗಿತ್ತು. ಅದರಲ್ಲಿ ರಿಪೋರ್ಟ್ ಪಾಸಿಟಿವ್ ಅಂತ ಬಂದಿತ್ತು. ಹೀಗಾಗಿ ಕೋವಿಡ್ ನಿಯಮದಂತೆ ಅಂತ್ಯ ಸಂಸ್ಕಾರ ಮಾಡಲಾಗಿದೆ.
ಸಂಸದೆ, ನಟಿ ಸುಮಲತಾ ಅಂಬರೀಶ್ ಅವರಿಗೂ ಕೊರೋನಾ ಪಾಸಿಟಿವ್ ಬಂದಿತ್ತು. ಈ ಬಗ್ಗೆ ಅವರು ಟ್ವೀಟ್ ಮಾಡುವ ಮೂಲಕ ಹೇಳಿಕೊಂಡಿದ್ದರು. ಜೊತೆಗೆ ಸೂಕ್ತ ಚಿಕಿತ್ಸೆ ಪಡೆದುಕೊಂಡು ಕೊರೋನಾ ವಿರುದ್ಧ ಹೋರಾಡುತ್ತೇನೆ ಎಂದಿದ್ದಾರೆ.
ಈವರೆಗೆ ದೇಶದಾದ್ಯಂತ ಒಟ್ಟಾರೆ 8,78,254 ಕೊರೋನಾ ಪ್ರಕರಣಗಳು ಬೆಳಕಿಗೆ ಬಂದಿವೆ. ಅದರಲ್ಲಿ 5,53471 ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದಾರೆ. 23, 174 ಜನರು ಸಾವನ್ನಪ್ಪಿದ್ದಾರೆ.
Comments are closed.