ಮನೋರಂಜನೆ

ಕನ್ನಡದ ಹಿರಿಯ ನಟಿ ಶಾಂತಮ್ಮ ಇನ್ನಿಲ್ಲ !

Pinterest LinkedIn Tumblr

ಬೆಂಗಳೂರು: ಕನ್ನಡ ಸೇರಿದಂತೆ ಹಿಂದಿ, ತಮಿಳು ಭಾಷೆಗಳಲ್ಲಿ 400ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಹಿರಿಯ ನಟಿ ಶಾಂತಮ್ಮ ವಿಧಿವಶರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು.

ಶಾಂತಮ್ಮ ಅವರು ಕಳೆದ ಹಲವು ವರ್ಷಗಳಿಂದ ಮೈಸೂರಿನ ತಮ್ಮ ಮಗಳ ಮನೆಯಲ್ಲಿ ವಾಸವಾಗಿದ್ದರು. ನಿನ್ನೆ ಸಂಜೆ ಸುಮಾರು 4 ಗಂಟೆ ಸಮಯದಲ್ಲಿ ಹಠಾತ್ತಾಗಿ ಕುಸಿದುಬಿದ್ದಿದ್ದ ಶಾಂತಮ್ಮ ಅವರನ್ನು ತಕ್ಷಣ ಆಂಬುಲೆನ್ಸ್​​ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಯಾವುದೇ ಆಸ್ಪತ್ರೆಯೂ ಸಹ ಅವರನ್ನು ದಾಖಲಿಸಿಕೊಳ್ಳಲಿಲ್ಲ. ಬೆಡ್ ಖಾಲಿ ಇಲ್ಲ ಎಂಬ ಸಬೂಬು ಹೇಳಿ ಕಳುಹಿಸಿದ್ದರು ಎನ್ನಲಾಗಿದೆ.

ಹೀಗಾಗಿಯೇ ಅವರನ್ನು ಕಾವೇರಿ ಆಸ್ಪತ್ರೆಗೆ ದಾಖಲು ಮಾಡುವ ಹೊತ್ತಿಗೆ ಮಧ್ಯರಾತ್ರಿ 1 ಗಂಟೆಯಾಗಿತ್ತು. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರಿಗೆ ಉಸಿರಾಟದ ತೊಂದರೆ ಉಂಟಾಗಿತ್ತು ಎನ್ನಲಾಗಿದೆ. ಇವತ್ತು ಸಂಜೆ 5.30ಕ್ಕೆ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ.

ಚಿನ್ನಾರಿ ಮುತ್ತ, ಕಂಸಾಳೆ ಕೈಸಾಲೆ, ನಾಂದಿ, ಪಾತರಗಿತ್ತಿ, ಬರ್ಫಿ ಸೇರಿದಂತೆ 400ಕ್ಕೂ ಹೆಚ್ಚು ಕನ್ನಡ, ತಮಿಳು, ಹಿಂದಿ ಚಿತ್ರಗಳಲ್ಲಿ ನಟಿಸಿದ್ದರು. ಜತೆಗೆ ಹಲವಾರು ಧಾರಾವಾಹಿಗಳಲ್ಲೂ ಶಾಂತಮ್ಮ ನಟಿಸಿದ್ದರು.

ನಾಳೆ ಕೋವಿಡ್ 19 ಸ್ವಾಬ್ ಟೆಸ್ಟ್ ಸೇರಿದಂತೆ ಹಲವು ವರದಿಗಳು ಬರಬೇಕಿದ್ದು, ಆ ಬಳಿಕ ಅಂತ್ಯಕ್ರಿಯೆ ಮಾಡುವುದಾಗಿ ಶಾಂತಮ್ಮ ಅವರ ಪುತ್ರಿ ಸುಮ ತಿಳಿಸಿದ್ದಾರೆ.

Comments are closed.