ಕ್ರೀಡೆ

ದಿಲ್ಲಿ ಮೇಡಮ್ ಟುಸ್ಸಾಡ್ಸ್‌ನಲ್ಲಿ ಕೊಹ್ಲಿ ಮೇಣದ ಪ್ರತಿಮೆ

Pinterest LinkedIn Tumblr


ಹೊಸದಿಲ್ಲಿ: ದಿಲ್ಲಿಯ ಮೇಡಮ್ ಟುಸ್ಸಾಡ್ಸ್ ಮ್ಯೂಸಿಯಂನಲ್ಲಿ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮೇಣದ ಪ್ರತಿಮೆಯು ಕಂಗೊಳಿಸಲಿದೆ.

ಲಂಡನ್‌ನಿಂದ ಆಗಮಿಸಿರುವ ಕಲಾವಿದರ ತಂಡವು ವಿರಾಟ್ ಕೊಹ್ಲಿ ದೇಹದ ಅಳತೆಯನ್ನು ತೆಗೆದುಕೊಂಡಿದ್ದಾರೆ.

ಇದರೊಂದಿಗೆ ಮಾಜಿ ಕ್ರಿಕೆಟ್ ದಿಗ್ಗಜರಾದ ಸಚಿನ್ ತೆಂಡೂಲ್ಕರ್ ತೆಂಡೂಲ್ಕರ್, ಕಪಿಲ್ ದೇವ್ ಹಾಗೂ ಲಿಯೊನೆಲ್ ಮೆಸ್ಸಿ ಸಾಲಿಗೆ ಕೊಹ್ಲಿ ಸೇರ್ಪಡೆಯಾಗಲಿದ್ದಾರೆ.

2006ರಲ್ಲಿ ಪ್ರಥಮ ದರ್ಜೆ ಕ್ರಿಕೆಟಿಗೆ ಪದಾರ್ಪಣಗೈದಿರುವ ವಿರಾಟ್ ಮುಂದಾಳತ್ವದಲ್ಲಿ 2008ರಲ್ಲಿ ಭಾರತ ಅಂಡರ್-19 ವಿಶ್ವಕಪ್ ಗೆದ್ದಿತ್ತು. ಬಳಿಕ 2011 ವಿಶ್ವಕಪ್ ವಿಜೇತ ಭಾರತ ತಂಡದ ಸದಸ್ಯರೂ ಆಗಿದ್ದರು.

ಐಸಿಸಿ ವರ್ಷದ ಕ್ರಿಕೆಟಿಗ ಸೇರಿದಂತೆ ಪದ್ಮ ಶ್ರೀ ಹಾಗೂ ಅರ್ಜುನ ಪ್ರಶಸ್ತಿಗಳಿಗೆ ಭಾಜನವಾಗಿರುವ ಕೊಹ್ಲಿ ಅವರಿಗೆ ಸಿಗಲಿರುವ ಮಗದೊಂದು ದೊಡ್ಡ ಗೌರವ ಇದಾಗಿರಲಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕೊಹ್ಲಿ, ಮೇಡಮ್ ಟುಸ್ಸಾಡ್ಸ್‌ನಲ್ಲಿ ಮೇಣದ ಪ್ರತಿಮೆಯಲ್ಲಿ ಕಾಣಿಸಿರುವುದು ನಿಜಕ್ಕೂ ತಮಗೆ ದೊರಕಿರುವ ಗೌರವ. ಇದಕ್ಕಾಗಿ ಧನ್ಯವಾದ ಸಮರ್ಪಿಸಲು ಇಚ್ಛಿಸುತ್ತಿರುವುದಾಗಿ ಹೇಳಿದ್ದಾರೆ.

ಒಟ್ಟಿನಲ್ಲಿ ತಮ್ಮತವರೂರಾದ ದಿಲ್ಲಿಯಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆಯು ಕಂಗೊಳಿಸಲಿದ್ದು, ಪ್ರವಾಸಿಗರ ಪಾಲಿಗೆ ಆಕರ್ಷಣೆಯ ಕೇಂದ್ರಬಿಂದುವಾಗಲಿದ್ದಾರೆ.

Comments are closed.