ಪುಣೆ: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸತತ ಗೆಲುವಿನ ಓಟಕ್ಕೆ ಮುಂಬೈ ಇಂಡಿಯನ್ಸ್ ತಂಡ ಬ್ರೇಕ್ ಹಾಕಿದೆ.
ಪುಣೆಯಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ 8 ವಿಕೆಟ್ ಗಳಿಂದ ಜಯ ಗಳಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ನಿಗದಿತ ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 169 ರನ್ ಪೇರಿಸಿತ್ತು. 170 ರನ್ ಗಳ ಗುರಿ ಪಡೆದ ಮುಂಬೈ ಇಂಡಿಯನ್ಸ್ ಇನ್ನು 2 ಎಸೆತ ಬಾಕಿ ಇರುವಂತೆ ಗೆಲುವಿನ ನಗೆ ಬೀರಿತು.
ಚೆನ್ನೈ ಪರ ಅಂಬಟ್ಟಿ ರಾಯುಡು 46, ಸುರೇಶ್ ರೈನಾ 75 ಮತ್ತು ಎಂಎಸ್ ಧೋನಿ 26 ರನ್ ಗಳಿಸಿದ್ದಾರೆ, ಮುಂಬೈ ಬೌಲಿಂಗ್ ನಲ್ಲಿ ಮೇಘ್ಲಾಗನ್ ಮತ್ತು ಕೃನಾಲ್ ಪಾಂಡ್ಯ ತಲಾ ಎರಡು ವಿಕೆಟ್ ಪಡೆದಿದ್ದಾರೆ.
ಮುಂಬೈ ಪರ ಸೂರ್ಯಕುಮಾರ್ ಯಾದವ್ 44, ಲೆವಿಸ್ 47 ಮತ್ತು ರೋಹಿತ್ ಶರ್ಮಾ ಅಜೇಯ 56 ರನ್ ಬಾರಿಸಿದ್ದಾರೆ.
Comments are closed.