ಕ್ರೀಡೆ

ಸೋಲಿನಿಂದ ಕಂಗೆಟ್ಟ ಆರ್‌ಸಿಬಿ ಪ್ಲೇ-ಆಫ್ ಪ್ರವೇಶ ಮತ್ತಷ್ಟು ಕಠಿಣ; ಚೆನ್ನೈ ಮುಂದೆ ಶರಣಾದ ಆರ್‌ಸಿಬಿ !

Pinterest LinkedIn Tumblr

ಪುಣೆ: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯ ಮಾಡು ಇಲ್ಲವೆ ಮಡಿ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 6 ವಿಕೆಟ್ ಗಳಿಂದ ಸೋಲು ಕಂಡಿದೆ.

ಪುಣೆಯಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ ತಂಡದ ಸ್ಟಾರ್ ಆಟಗಾರರು ವೈಫಲ್ಯ ಅನುಭವಿಸಿದ್ದು ಅಲ್ಪಮೊತ್ತಕ್ಕೆ ಔಟಾಗಿದ್ದರಿಂದ ನಿಗದಿತ ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 127 ರನ್ ಪೇರಿಸಿತ್ತು.

ಆರ್‌ಸಿಬಿ ನೀಡಿದ 128 ರನ್ ಗಳ ಗುರಿ ಬೆನ್ನಟ್ಟಿದ ಚೆನ್ನೈ ತಂಡ 4 ವಿಕೆಟ್ ಗೆ 128 ರನ್ ಬಾರಿಸುವ ಮೂಲಕ ಗೆಲುವು ಸಾಧಿಸಿತು.

ಆರ್‌ಸಿಬಿ ಪರ ಪಾರ್ಥಿವ್ ಪಟೇಲ್ 53 ಮತ್ತು ಟೀಮ್ ಸೌಥಿ 36 ರನ್ ಗಳಿಸಿದ್ದಾರೆ. ಚೆನ್ನೈ ಪರ ಬೌಲಿಂಗ್ ನಲ್ಲಿ ರವೀಂದ್ರ ಜಡೇಜಾ 3, ಹರ್ಭಜನ್ ಸಿಂಗ್ 2 ವಿಕೆಟ್ ಪಡೆದಿದ್ದಾರೆ.

ಚೆನ್ನೈ ಪರ ಅಂಬಟ್ಟಿ ರಾಯುಡು 32, ಸುರೇಶ್ ರೈನಾ 25, ಎಂಎಸ್ ಧೋನಿ ಅಜೇಯ 31 ರನ್ ಬಾರಿಸಿದ್ದಾರೆ.

ಈ ಗೆಲುವಿನೊಂದಿಗೆ 10 ಪಂದ್ಯಗಳಲ್ಲಿ ಏಳು ಗೆಲುವು ದಾಖಲಿಸಿರುವ ಸಿಎಸ್‌ಕೆ 14 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಅತ್ತ ಒಂಬತ್ತು ಪಂದ್ಯಗಳಲ್ಲಿ ಆರು ಅಂಕಗಳನ್ನು ಮಾತ್ರ ಸಂಪಾದಿಸಿರುವ ಆರ್‌ಸಿಬಿ ಆರನೇ ಸ್ಥಾನದಲ್ಲೇ ಮುಂದುವರಿದಿದ್ದು, ಪ್ಲೇ-ಆಫ್ ಪ್ರವೇಶ ಮತ್ತಷ್ಟು ಕಠಿಣವೆನಿಸಿದೆ.

Comments are closed.