ಕ್ರೀಡೆ

ರಿಷಬ್ ಪಂತ್ ಗೆ ಖುಲಾಯಿಸಿದ ಅದೃಷ್ಟ ! ಧವನ್‌ ಸ್ಥಾನ ತುಂಬಲಿದ್ದಾರೆ ಪಂತ್

Pinterest LinkedIn Tumblr

ಮುಂಬೈ: ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಶಿಖರ್ ಧವನ್ ಗಾಯಗೊಂಡು ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದಿದ್ದು ಅವರ ಜಾಗಕ್ಕೆ ಯುವ ವಿಕೆಟ್ ಕೀಪರ್ ರಿಷಬ್ ಪಂತ್ ಗೆ ಲಂಡನ್ ಟಿಕೆಟ್ ಸಿಗುವುದು ಖಚಿತವಾಗಿದೆ.

ಶಿಖರ್ ಧವನ್ ಅವರ ಹೆಬ್ಬರಳಿಗೆ ಚೆಂಡು ತಗುಲಿ ಗಾಯವಾಗಿದ್ದು ಈ ಹಿನ್ನೆಲೆಯಲ್ಲಿ ಅವರಿಗೆ ವೈದ್ಯರು ಮೂರು ವಾರಗಳ ವಿಶ್ರಾಂತಿಗೆ ಸಲಹೆ ನೀಡಿದ್ದಾರೆ. ಇದರಿಂದಾಗಿ ಟೀಂ ಇಂಡಿಯಾ ತಂಡವನ್ನು ರಿಷಬ್ ಪಂತ್ ಸೇರಿಕೊಳ್ಳಲಿದ್ದಾರೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಮೂಲಗಳು ತಿಳಿಸಿವೆ.

ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶನ ನೀಡುವ ರಿಷಬ್ ಪಂತ್ ಅವರನ್ನು ಟೀಂ ಇಂಡಿಯಾ ಆಯ್ಕೆ ಸಮಿತಿ ನಿರ್ಲಕ್ಷಿಸಿತ್ತು. ನಂತರ ರಿಷಬ್ ರನ್ನು ವಿಶ್ವಕಪ್ ಗೆ ಆಯ್ಕೆ ಮಾಡಬೇಕಿತ್ತು ಎಂಬ ಮಾತುಗಳು ಕೇಳಿಬಂದಿದ್ದರಿಂದ ಅವರಿಗೆ ಲಂಡನ್ ಪಿಚ್ ಗಳಲ್ಲಿ ಆಡಿದ ಅನುಭವ ಕಡಿಮೆ ಹೀಗಾಗಿ ಅವರನ್ನು ಆಯ್ಕೆ ಮಾಡಲಿಲ್ಲ ಎಂದು ಆಯ್ಕೆ ಸಮಿತಿ ಸಬೂಬು ನೀಡಿತ್ತು.

Comments are closed.