ಲಂಡನ್: 12ನೇ ಆವೃತ್ತಿಯ ಐಸಿಸಿ ವಿಶ್ವಕಪ್ನಲ್ಲಿ ಭಾರತ ತಂಡದ ಎದುರು ಕಳಪೆ ಪ್ರದರ್ಶನ ತೋರುವ ಮೂಲಕ ಸೋತು ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿರುವ ನಾಯಕ ಸರ್ಫರಾಜ್ ಅಹ್ಮದ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಜೂನ್ 16 ರಂದು ನಡೆದ ಪಂದ್ಯದಲ್ಲಿ ಭಾರತ ಎದುರು 89 ರನ್ಗಳಿಂದ ಪಾಕಿಸ್ತಾನ ಸೋತಿತ್ತು. ಪಂದ್ಯದ ವೇಳೆ ಕೀಪಿಂಗ್ ಮಾಡುತ್ತಿದ್ದ ಸರ್ಫರಾಜ್ ಅಹ್ಮದ್ ಆಕಳಿಕೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಟ್ರೋಲ್ ಆಗಿತ್ತು. ಸರ್ಫರಾಜ್ ಅವರು ಪಂದ್ಯದ ಗೆಲುವಿನ ಬಗ್ಗೆ ನಿರಾಸಕ್ತಿ ವಹಿಸಿದ್ದಾರೆ ಎಂದು ಪಾಕ್ ಅಭಿಮಾನಿಗಳ ಸಿಟ್ಟಿಗೆ ಗುರಿಯಾಗಿದ್ದರು.
ನಮ್ಮ ತಂಡ ಟಾಸ್ ಗೆದ್ದರೆ ಬ್ಯಾಟಿಂಗ್ ಆಯ್ಕೆ ಮಾಡಿಕೊಳ್ಳಬೇಕು ಎಂದು ಸರ್ಫರಾಜ್ಗೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದರು. ಆದರೆ, ಅವರ ಮಾತನ್ನು ತಿರಸ್ಕರಿಸಿ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಸೋಲಿಗೆ ಕಾರಣ ಎಂದು ಪಾಕ್ ಅಭಿಮಾನಿಗಳು ನಾಯಕನ ವಿರುದ್ಧ ಕಿಡಿಕಾರಿದ್ದರು. ಈ ಹಿನ್ನೆಲೆಯಲ್ಲಿ ಸರ್ಫರಾಜ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.
Comments are closed.