ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಐಪಿಎಲ್ ಪಂದ್ಯವನ್ನು ವೀಕ್ಷಿಸಲು ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭೇಟಿ ನೀಡಿದರು.
ಕ್ರಿಕೆಟ್ ಅಭಿಮಾನಿಯಾಗಿರುವ ಸಿದ್ದರಾಮಯ್ಯ ಅವರು ಚುನಾವಣಾ ಪ್ರಚಾರಕ್ಕೆ ವಿರಾಮ ನೀಡಿ ಕ್ರೀಡಾಂಗಣದಲ್ಲಿ ಕುಳಿತು ಪಂದ್ಯ ವೀಕ್ಷಿಸಿದರು. ತಾನು ಆರ್‌ಸಿಬಿ ಅಭಿಮಾನಿ ಎಂದು ಹೇಳಿದ್ದು, ಆರ್‌ಸಿಬಿ ಪಂದ್ಯ ಗೆದ್ದ ನಂತರ ಸಂತಸ ವ್ಯಕ್ತಪಡಿಸಿದ್ದಾರೆ.
ಕ್ರಿಕೆಟ್ ನನ್ನ ಇಷ್ಟದ ಆಟ, ಆರ್‌ಸಿಬಿ ನನ್ನ ಹೆಮ್ಮೆಯ ತಂಡ. ನನ್ನಂತಹ ಕೋಟ್ಯಂತರ ಅಭಿಮಾನಿಗಳ ಹಾರೈಕೆ ಆರ್‌ಸಿಬಿ ಹುಡುಗರ ಜೊತೆಗಿದೆ. ಇಂದಲ್ಲ ನಾಳೆ ನಮ್ಮವರೂ ಕಪ್ ಗೆಲ್ಲುತ್ತಾರೆ ಎಂಬ ವಿಶ್ವಾಸ ನನಗಿದೆ. ಓರ್ವ ಕನ್ನಡಿಗನಾಗಿ ನನ್ನ ಬೆಂಬಲ ಯಾವಾಗಲೂ ನಮ್ಮ ಆರ್‌ಸಿಬಿಗೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಪಂದ್ಯ ವೀಕ್ಷಿಸುತ್ತಿರುವ ಫೋಟೊವನ್ನು ಹಂಚಿಕೊಂಡಿದ್ದಾರೆ.
Comments are closed.