ಬೆಂಗಳೂರು: ನಿನ್ನೆ (ಶನಿವಾರ) ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್.ಸಿ.ಬಿ) ತಂಡವು ಚೆನ್ನೈ ಸೂಪರ್ ಕಿಂಗ್ಸ್ (ಸಿ ಎಸ್ ಕೆ) ತಂಡವನ್ನು ಸೋಲಿಸಿ ಭರ್ಜರಿ ಗೆಲುವು ಸಾಧಿಸಿದೆ. ಈ ಖುಷಿಯನ್ನು ಸಂಪೂರ್ಣ ಕರ್ನಾಟಕವೇ ಸಂಭ್ರಮಿಸಿದ್ದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಆರ್‌ಸಿಬಿ ಗೆಲುವಿನ ಖುಷಿಯನ್ನು ನಾಡಿನ ಜನತೆಯೊಂದಿಗೆ ಹಂಚಿಕೊಂಡಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವಿನ ಹೈವೋಲ್ಟೇಜ್ ಪಂದ್ಯವನ್ನು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನೇರವಾಗಿ ವೀಕ್ಷಿಸಿದ ಸಿದ್ದರಾಮಯ್ಯ, ರೋಚಕ ಗೆಲುವಿನೊಂದಿಗೆ ಪ್ಲೇ ಆಫ್ಗೆ ಎಂಟ್ರಿ ಕೊಟ್ಟಿರುವ ಆರ್‌ಸಿಬಿ ತಂಡವನ್ನು ಕೊಂಡಾಡಿದ್ದಾರೆ.
“ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಆರ್.ಸಿ.ಬಿ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಐಪಿಎಲ್ ಪಂದ್ಯ ವೀಕ್ಷಿಸಿದೆ.
ಈ ನಿರ್ಣಾಯಕ ಪಂದ್ಯದಲ್ಲಿ ನಮ್ಮವರು ಗೆದ್ದು ಮುಂದಿನ ಹಂತಕ್ಕೆ ಹೋಗಲಿ ಎಂಬ ಹಾರೈಕೆ ನನ್ನದು. #ಈಸಲಕಪ್‌ನಮ್ದೆ #eesalacupnamde”.
“ಸತತ 6ನೇ ಗೆಲುವಿನೊಂದಿಗೆ ನಮ್ಮ Royal Challengers Bengaluru ಪ್ಲೇಆಫ್ ಸುತ್ತಿಗೆ ಲಗ್ಗೆಯಿಟ್ಟಿದೆ..ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಾಜರಿದ್ದು ಪಂದ್ಯದ ಪ್ರತಿ ಕ್ಷಣವನ್ನು ಆನಂದಿಸಿದೆ. #NammaRCB ತಂಡದ ಐತಿಹಾಸಿಕ ಗೆಲುವಿನ ಕ್ಷಣಗಳಿಗೆ ಸಾಕ್ಷಿಯಾದುದ್ದು ಖುಷಿಕೊಟ್ಟಿದೆ. ಇದು ಆರ್.ಸಿ.ಬಿ ಯ ಹೊಸ ಅಧ್ಯಾಯ.#EeSalaCupNamde” ಎಂದು ಬರೆದುಕೊಂಡಿದ್ದಾರೆ.
Comments are closed.