ಮಂಗಳೂರು ಅಕ್ಟೋಬರ್ 12 : ಭಾನುವಾರ ನಿಧನ ಹೊಂದಿದ ಕರ್ನಾಟಕ ಬ್ಯಾಂಕಿನ ಮಾಜಿ ಅಧ್ಯಕ್ಷ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿದ್ದ ಅನಂಕೃಷ್ಣ ಅವರ ಪಾರ್ಥೀವ ಶರೀರಕ್ಕೆ ಪುಷ್ಪ ನಮನ ಸಲ್ಲಿಸದ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು , ಅನಂಕೃಷ್ಣ ನಿಧನಕ್ಕೆ ತಮ್ಮ ತೀವ್ರ ಸಂತಾಪ ವ್ಯಕ್ತಪಡಿಸಿ, ಅವರ ನಿಧನದಿಂದ ಬ್ಯಾಂಕಿಂಗ್ ಕ್ಷೇತ್ರಕ್ಕೆ ಅಗಾಧ ನಷ್ಠವಾಗಿದ್ದು, ಅವರ ಕುಟುಂಬ ವರ್ಗಕ್ಕೆ ಭಗವಂತ ದು:ಖ ಭರಿಸುವ ಶಕ್ತಿ ನೀಡಲಿ , ಮೃತರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಸಂತಾಪ ವ್ಯಕ್ತಪಡಿಸಿದರು.
ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವರಾಗಿದ್ದ ಅನಂಕೃಷ್ಣ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ. 2000 ಇಸವಿಯಲ್ಲಿ ಕರ್ನಾಟಕ ಬ್ಯಾಂಕ್ ಅಧ್ಯಕ್ಷ ಹಾಗೂ ಸಿಇಓ ಆಗಿ ನೇಮಕಗೊಂಡಿದ್ದ, ಅನಂತ ಕೃಷ್ಣ ಬಳಿಕ ಕಾರ್ಯನಿರ್ವಹಣಾ ಅಧಿಕಾರಿಯಾಗಿ ಸೇವೆಯಲ್ಲಿ ಮುಂದುವರಿದು 2016ರಲ್ಲಿ ವೃತ್ತಿ ಜೀವನದಿಂದ ನಿವೃತ್ತರಾಗಿದ್ದರು.
Comments are closed.