ಬೆಂಗಳೂರು: ದುಬೈನಿಂದ ಬೆಂಗಳೂರಿಗೆ ಅಕ್ರಮವಾಗಿ 25 ಐ-ಫೋನ್ ಮತ್ತು 5 ಆಪಲ್ ವಾಚ್ಗಳನ್ನು ಸಾಗಿಸುತ್ತಿದ್ಧ ಉಡುಪಿ ಮೂಲದ ಪ್ರಯಾಣಿಕ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾನೆ. ಈ ವ್ಯಕ್ತಿಯಿಂದ ಸುಮಾರು 30 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಕಸ್ಟಮ್ಸ್ ಮೂಲದ ಪ್ರಕಾರ ಉಡುಪಿ ಮೂಲದ ತಬ್ರೇಜ್ ಅಹಮದ್ ಎಂಬ ಪ್ರಯಾಣಿಕ ಎಂದು ತಿಳಿದುಬಂದಿದೆ.
ಜುಲೈ 20 ಶನಿವಾರ, ದುಬೈನಿಂದ ಬೆಂಗಳೂರಿಗೆ ಎಮಿರೇಟ್ಸ್ (ಇಕೆ-568) ವಿಮಾನದಲ್ಲಿ ಬಂದ ಪ್ರಯಾಣಿಕನನ್ನು ಖಚಿತ ಮಾಹಿತಿ ಮೇರೆಗೆ ಬೆಂಗಳೂರು ಕಸ್ಟಮ್ಸ್ನ ಏರ್ ಇಂಟೆಲಿಜೆನ್ಸ್ ಯೂನಿಟ್ನ ಅಧಿಕಾರಿಗಳು ತಪಾಸಣೆ ನಡೆಸಿದ್ದಾಗ, ಅಕ್ರಮವಾಗಿ ವಿದೇಶದಿಂದ ತಂದಿರುವ ಐ-ಫೋನ್ ಮತ್ತು ಆಪಲ್ ವಾಚ್ಗಳು ಪತ್ತೆಯಾಗಿವೆ.
ಪ್ರಯಾಣಿಕನನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದು, ಆತ ತನ್ನ ಬ್ಯಾಗ್ನಲ್ಲಿ ಮರೆಮಾಚಿ ಅಕ್ರಮವಾಗಿ ವಸ್ತುಗಳನ್ನು ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಕಸ್ಟಮ್ಸ್ ಕಾಯ್ದೆಯ 2016ರ ಬ್ಯಾಗೇಜ್ ನಿಯಮಗಳ ಪ್ರಕಾರ ಒಬ್ಬ ಪ್ರಯಾಣಿಕನಿಗೆ ಗರಿಷ್ಠ 50 ಸಾವಿರ ಮೌಲ್ಯದ ವಸ್ತುಗಳನ್ನು ಸಾಗಿಸಲು ಅವಕಾಶ ಇದೆ. ಆದರೆ ಆತ 25 ಐ-ಫೋನ್ ಮತ್ತು 5 ಆಪಲ್ ವಾಚ್ಗಳನ್ನು ಅಕ್ರಮವಾಗಿ ಸಾಗಿಸುವ ಯತ್ನ ನಡೆಸಿದ್ದು, ಪ್ರತಿಯೊಂದು ಐ-ಫೋನ್ ಬೆಲೆ 1 ಲಕ್ಷ ಎನ್ನಲಾಗಿದೆ. ಪ್ರತಿಯೊಂದು ಐ-ಫೋನ್ಗೆ 50 ಸಾವಿರ ಕಸ್ಟಮ್ಸ್ ಸುಂಕವನ್ನು ಪಡೆಯುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
Comments are closed.