ಆರೋಗ್ಯ

ಈ ನೀರಿನಿಂದ ಬಾಯಿ ಮುಕ್ಕಳಿಸುವುದರಿಂದ ಬಾಯಿ ಹುಣ್ಣು ಶಮನ

Pinterest LinkedIn Tumblr

· ಹುರಿದ ಕಡಲೆಯ ಹಿಟ್ಟನ್ನು ಕೆಂಡದ ಮೇಲೆ ಹಾಕಿ ಬಂದ ಹೊಗೆಯನ್ನು ಕುಡಿಯುವುದರಿಂದ ಬಿಕ್ಕಳಿಕೆ ನಿಲ್ಲುತ್ತದೆ.
· ಶೀತ ಅಥವಾ ಇನ್ನಾವುದೇ ತೊಂದರೆಗಳಿಂದ ಗಂಟಲು ಕಟ್ಟಿ ಸರಿಯಾಗಿ ಮಾತನಾಡಲು ತೊಂದರೆಯಾದರೆ, ಹಸಿಶುಂಠಿ, ಲವಂಗ ಮತ್ತು ಸ್ವಲ್ಪ ಅಡುಗೆ ಉಪ್ಪು ಸೇರಿಸಿ ಬಾಯಿಗೆ ಹಾಕಿಕೊಂಡು ಚಪ್ಪರಿಸಿದರೆ ಗಂಟಲು ಕಟ್ಟುವುದು ನಿವಾರಣೆಯಾಗುತ್ತದೆ.
· ಶುಂಠಿ ಸುಟ್ಟು ಬೂದಿ ಮಾಡಿಟ್ಟುಕೊಂಡು ಅದಕ್ಕೆ ಸ್ವಲ್ಪ ಉಪ್ಪು ಬೆರೆಸಿ ಹಲ್ಲುಜ್ಜುವುದರಿಂದ ಬಾಯಿ ವಾಸನೆ ಕಡಿಮೆಯಾಗುತ್ತದೆ.
· ಒಂದು ಬಟ್ಟಲು ಬಿಸಿನೀರಿನಲ್ಲಿ ಅರ್ಧ ಟೀ ಚಮಚ ಉಪ್ಪನ್ನು ಕರಗಿಸುವುದು. ನಂತರ ಈ ನೀರಿನಿಂದ ಬಾಯಿ ಮುಕ್ಕಳಿಸುವುದರಿಂದ ಬಾಯಿ ಹುಣ್ಣು ಶಮನವಾಗುವುದು.
· ಬರೀ ಕೊತ್ತಂಬರಿಸೊಪ್ಪನ್ನು ಬಾಯಿಯಲ್ಲಿ ಜಗಿಯುವುದರಿಂದ ಬಾಯಿಯಿಂದ ದುರ್ಗಂಧ ಬರುವುದಿಲ್ಲ.
· ಬಾಯಿಯಿಂದ ದುರ್ವಾಸನೆ ಬರುತ್ತಿದ್ದರೆ ನಿಂಬೆರಸವನ್ನು ನೀರಿನಲ್ಲಿ ಬೆರೆಸಿ ಆಗಾಗ ಬಾಯಿ ಮುಕ್ಕಳಿಸುವುದರಿಂದ ನಿವಾರಣೆಯಾಗುವುದು
· ಗಂಟಲ ನೋವು ಇದ್ದಾಗ, ಸ್ವರಕಳೆದಾಗ ತುಳಸಿಯ ಎಲೆಹಾಕಿ ನೀರನ್ನು ಕುದಿಸಿ ಬಾಯಿಮುಕ್ಕಳಿಸಬೇಕು
· ಬಾಯಿಯ ದುರ್ಗಂಧ ನಿವಾರಣೆಗೆ ಗುಲಾಬಿ(10 ಗ್ರಾಂ), ಕಲ್ಲುಸಕ್ಕರೆ(5 ಗ್ರಾಂ), ಪಚ್ಚಕರ್ಪೂರ(ಸ್ವಲ್ಪ) ಬೆರೆಸಿದ ಮಾತ್ರೆ ತಯಾರಿಸಿ, ಆಗಾಗ ಬಾಯಿಯಲ್ಲಿ ಹಾಕಿಕೊಂಡು ಚಪ್ಪರಿಸಿದರೆ ದುರ್ಗಂಧ ತೊಲಗುವದು. ಕೆಮ್ಮಿಗೂ ಇದು ಉಪಶಮನಕಾರಿ

Comments are closed.