ಸುಟ್ಟ ಗಾಯಕ್ಕೆ ತಕ್ಷಣ ಜೇನುತುಪ್ಪ ಹಚ್ಚುವುದರಿಂದ ಉರಿ ಶಮನವಾಗಿ ಗಾಯ ಶೀಘ್ರ ಮಾಗುತ್ತದೆ.
· ಹುಳುಕಡ್ಡಿ, ಇಸಬು ಮುಂತಾದ ಚರ್ಮರೋಗಗಳಿಗೆ ಮತ್ತು ಹುಣ್ಣುಗಳ ಮೇಲೆ ಜೇನುತುಪ್ಪ ಸವರುವುದರಿಂದ ಗುಣವಾಗುವುದು.
· ಸುಟ್ಟಗಾಯಕ್ಕೆ ಎಳ್ಳೆಣ್ಣೆ ಹಚ್ಚುವುದರಿಂದ ಗಾಯ ಬೇಗ ವಾಸಿಯಾಗುತ್ತದೆ.
· ಕುರುಗಳನ್ನು ಪಕ್ವಗೊಳಿಸಲು ಸೀತಾಫಲ ಹಣ್ಣಿನ ತಿರುಳನ್ನು ಉಪ್ಪಿನ ಜತೆ ಬೆರೆಸಿ ಲೇಪಿಸಬೇಕು.
· ತುಳಸಿ ಗಿಡದ ಕಾಂಡದಿಂದ ಹುಳುಕಡ್ಡಿಯ ಭಾಗವನ್ನು ಚೆನ್ನಾಗಿ ಕೆರೆದು, ಅನಂತರ ತುಳಸಿ ಸೊಪ್ಪಿನ ಕಷಾಯದಿಂದ ಆ ಭಾಗವನ್ನು ಚೆನ್ನಾಗಿ ತೊಳೆಯಬೇಕು. ಇದಾದ ಮೇಲೆ ತುಳಸಿ ಸೊಪ್ಪನ್ನು ಚೆನ್ನಾಗಿ ಅರೆದು ಹುಳುಕಡ್ಡಿಯ ಮೇಲೆ ಲೇಪಿಸುವುದರಿಂದ ಶೀಘ್ರ ಗುಣ ಕಂಡುಬರುವುದು.
· ಚರ್ಮದ ಅಲರ್ಜಿಯಿಂದ ಬಳಲುತ್ತಿರುವವರು ಶ್ರೀಗಂಧವನ್ನು ಬಳಸಿದರೆ ಪರಿಣಾಮ ಬೀರುವುದು.
· ಒಂದು ಟೀ ಚಮಚ ನಿಂಬೇಹಣ್ಣಿನ ರಸದೊಂದಿಗೆ ಶ್ರೀಗಂಧದ ಪುಡಿಯನ್ನು ಬೆರೆಸಿ ಅಲರ್ಜಿಯಿರುವ ಚರ್ಮದ ಮೇಲೆ ಲೇಪಿಸುತ್ತಾ ಬಂದರೆ ಗುಣವಾಗುವುದು
· ಚರ್ಮರೋಗಕ್ಕೆ (ಇಸಬು,ಗಜಕರ್ಣಕ್ಕೆ) ತುಳಸಿಯ ಎಲೆಯನ್ನು ಉಪ್ಪಿನೊಂದಿಗೆ ಬೆರೆಸಿ ಅರೆದು ಲೇಪಿಸಬೇಕು, ತುಳಸಿ ಕಷಾಯ ಕುಡಿಯಬೇಕು.
· ಗುಲಾಬಿ ಎಣ್ಣೆಯ ಅಭ್ಯಂಗ ಸ್ನಾನದಿಂದ ಚರ್ಮ ಕೋಮಲವಾಗುತ್ತದೆ.
Comments are closed.