ಕುಂದಾಪುರ: ಉಡುಪಿ ಜಿಲ್ಲೆಯಲ್ಲಿ ಕೋವಿಡ್-19 ಕೊರೋನಾ ಸೋಂಕು ವ್ಯಕ್ತಿಯೊಬ್ಬರನ್ನು ಬಲಿ ಪಡೆದಿದೆ. ಮುಂಬೈನಿಂದ ಉಡುಪಿ ಜಿಲ್ಲೆಗೆ ಬಂದು ಕುಂದಾಪುರದ ಕ್ವಾರೆಂಟೈನ್ ಕೇಂದ್ರದಲ್ಲಿದ್ದ ವ್ಯಕ್ತಿ ಕೊರೋನಾದಿಂದ ದುರ್ಮರಣ ಹೊಂದಿದ್ದಾರೆ.
ಕುಂದಾಪುರ ಮೂಲದ 54 ವರ್ಷ ಪ್ರಾಯದ ವ್ಯಕ್ತಿ ಇತ್ತೀಚೆಗೆ ಮುಂಬೈನಿಂದ ಪಾಸ್ ಪಡೆದು ಆಗಮಿಸಿದ್ದರು. ಅವರನ್ನು ಕುಂದಾಪುರದಲ್ಲಿ ಸರ್ಕಾರಿ ಕ್ವಾರೆಂಟೈನ್ ಮಾಡಲಾಗಿತ್ತು. ಆದರೆ ತೀವ್ರ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಅವರನ್ನು ಕುಂದಾಪುರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೇ ಎರಡು ದಿನದ ಹಿಂದೆ ಮೃತಪಟ್ಟಿದ್ದರು.
ವ್ಯಕ್ತಿ ಬಳಿಕ ಗಂಟಲು ದ್ರವ ಹಾಗೂ ಕೋವಿಡ್ ತಪಾಸಣೆ ನಡೆಸಿದ್ದು ಅದರ ವರದಿ ಪಾಸಿಟಿವ್ ಬಂದಿದೆ. ವ್ಯಕ್ತಿಯು ಕೊರೋನಾ ಸೋಂಕಿನಿಂದಲೇ ಮೃತಪಟ್ಟಿದ್ದು ದೃಢವಾಗಿದೆ. ಸದ್ಯ ಅವರೊಂದಿಗೆ ಕ್ವಾರೆಂಟೈನ್ ಕೇಂದ್ರದಲ್ಲಿದ್ದವರು ಹಾಗೂ ಅವರೊಂದಿಗೆ ಸಂಪರ್ಕದಲ್ಲಿದ್ದವರನ್ನು ತಪಾಸಣೆ ನಡೆಸಲಾಗುತ್ತಿದೆ. ಟ್ರಾವೆಲ್ ಹಿಸ್ಟರಿ ಪಡೆಯುವ ಕೆಲಸವಾಗುತ್ತಿದೆ. ಅಲ್ಲದೆ ಕೆಲವು ಅಧಿಕಾರಿಗಳು ಹಾಗೂ ವ್ಯಕ್ತಿಗೆ ಚಿಕಿತ್ಸೆ ನೀಡಿದ ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳನ್ನು ಕ್ವಾರೆಂಟೈನ್ ಮಾಡಲಾಗುತ್ತದೆ ಎಂಬ ಮಾಹಿತಿಯಿದೆ.
(ವರದಿ- ಯೋಗೀಶ್ ಕುಂಭಾಸಿ)
Comments are closed.