ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗಿದೆ. ಇಂದು ಜಿಲ್ಲೆಯಲ್ಲಿ ಮತ್ತೆ 13 ಹೊಸ ಕೋವಿಡ್-19 ಸೋಂಕು ಪ್ರಕರಣ ಪತ್ತೆಯಾಗಿದ್ದು, ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 177ಕ್ಕೆ ಏರಿಕೆಯಾಗಿದೆ.
ಇಂದಿನ ಪ್ರಕರಣಗಳ ಪೈಕಿ ಒಬ್ಬರು ತೆಲಂಗಾಣದಿಂದ ಬಂದಿದ್ದರೆ, ಉಳಿದವರೆಲ್ಲಾ ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ. ಇವರಲ್ಲಿ ಎರಡು ವರ್ಷದ ಮಗುವಿಗೆ ಸೋಂಕಿದೆ.
ಮಹಾರಾಷ್ಟ್ರದಿಂದ ಪುಣೆಯಿಂದ ಆಗಮಿಸಿದ ಕೋಟದ ಬಾರಿಕೆರೆಯ ಮಹಿಳೆ 14 ದಿನದಿಂದ ಕುಂದಾಪುರದಲ್ಲಿ ಕ್ವಾರಂಟೈನ್ ನಲ್ಲಿದ್ದರು. ಆದರೆ ರಿಪೋರ್ಟ್ ಲಭ್ಯವಾಗುವ ಮುನ್ನವೇ ಮೇ 28 ರಂದು ಸಂಜೆ ಮನೆಗೆ ಬಂದಿದ್ದು ಮೇ 29ರ ರಾತ್ರಿಯ ವೇಳೆಗೆ ಪಾಸಿಟಿವ್ ಎಂದು ತಿಳಿದು ಬಂದಿದೆ.
ಜಿಲ್ಲೆಯಲ್ಲಿ ಶುಕ್ರವಾರ 15 ಜನರಿಗೆ ಕೋವಿಡ್-19 ಸೋಂಕು ದೃಢವಾಗಿತ್ತು. ಇಂದು ಮತ್ತೆ 13 ಮಂದಿಗೆ ಸೋಂಕು ತಾಗಿತ್ತು ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 177 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಇಂದು ಕೋವಿಡ್ ಸೋಂಕಿನಿಂದ ಗುಣಮುಖರಾದ 18 ಮಕ್ಕಳು ಸೇರಿ 45 ಜನರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಜಿಲ್ಲೆಯಲ್ಲಿ ಕೊರೋನಾ ಸೋಂಕು ಪಾಸಿಟಿವ್ ಬಂದಿದ್ದ ನಾಲ್ವರು ಪೊಲೀಸರು ಸಹ ಇಂದು ಗುಣಮುಖರಾಗಿ ಬಿಡುಗಡೆಯಾದರು.
Comments are closed.