ಆರೋಗ್ಯ

ಉಡುಪಿ ಜಿಲ್ಲೆಯಲ್ಲಿ ಶನಿವಾರವೂ ಕೊರೋನಾ ಕಾಟ: ಬೆಂಗಳೂರಿನಿಂದ ಬಂದ ವ್ಯಕ್ತಿ ಸೇರಿ 13 ಮಂದಿಗೆ ಪಾಸಿಟಿವ್

Pinterest LinkedIn Tumblr

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಶನಿವಾರ ಒಟ್ಟು 13 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗುವ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 1063 ಕ್ಕೆ ಏರಿಕೆಯಾಗಿದೆ.

ಸೋಂಕಿತರಲ್ಲಿ 9 ಮಂದಿ ಪುರುಷರು, ಮೂರು ಮಕ್ಕಳು ಹಾಗೂ ಓರ್ವ ಮಹಿಳೆ ಸೇರಿದ್ದಾರೆ. ಸೋಂಕಿತರಲ್ಲಿ 10 ಮಂದಿ ಮಹಾರಾಷ್ಟ್ರದಿಂದ ಬಂದವರಾಗಿದ್ದು, ಓರ್ವ ವ್ಯಕ್ತಿ ಬೆಂಗಳೂರು, ಓರ್ವ ವ್ಯಕ್ತಿಗೆ ರೋಗಿ ಸಂಖ್ಯೆ 5451 ಹಾಗೂ ಮತ್ತೋಬ್ಬರ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ. ಎಲ್ಲಾ ಸೋಂಕಿತರಿಗೆ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಉಡುಪಿ ಜಿಲ್ಲೆಯಲ್ಲಿ ಶನಿವಾರ ಒಂಬತ್ತು ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು ಜಿಲ್ಲೆಯಲ್ಲಿ ಒಟ್ಟು 108 ಸಕ್ರೀಯ ಪ್ರಕರಣಗಳಿದೆ.

Comments are closed.