ಉಡುಪಿ: ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ ಒಂಬತ್ತು ಜನರಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಹೊಸ ಒಂಬತ್ತು ಹೊಸ ಪ್ರಕರಣಗಳಿಂದ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 1125ಕ್ಕೆ ಏರಿಕೆ ಕಂಡಿದೆ.
ಜಿಲ್ಲೆಯಲ್ಲಿ ಕಂಡುಬಂದು ಹೆಚ್ಚಿನ ಸೋಂಕಿತರಲ್ಲಿ ಮಹಾರಾಷ್ಟ್ರದಿಂದ ಜಿಲ್ಲೆಗೆ ಬಂದವರಾಗಿದ್ದಾರೆ. ಆದರೆ ಕೋವಿಡ್ -19 ಸೋಂಕು ಕಂಡು ಬಂದ ಬಹುತೇಕರಲ್ಲಿ ಯಾವುದೇ ಸೋಂಕು ಲಕ್ಷಣಗಳು ಕಂಡು ಬಂದಿಲ್ಲ. ಹಾಗಾಗಿ ಬಹುತೇಕರು ಬೇಗನೇ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 13,960 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿದ್ದು, ಅದರಲ್ಲಿ 12,483 ವರದಿಗಳು ನೆಗಟಿವ್ ಬಂದಿದೆ. 1125 ವರದಿ ಪಾಸಿಟಿವ್ ಬಂದಿದ್ದು, ಇನ್ನೂ 352 ವರದಿಗಳು ಬರಲು ಬಾಕಿಯಿದೆ.
ಜಿಲ್ಲೆಯಲ್ಲಿ ಒಟ್ಟು 1125 ಮಂದಿಗೆ ಸೋಂಕು ದೃಢಪಟ್ಟಿದೆ. ಅದರಲ್ಲಿ 1037 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಇನ್ನೂ 86 ಸಕ್ರಿಯ ಪ್ರಕರಣಗಳು ಇದ್ದು, ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Comments are closed.