ಉಡುಪಿ: ಉಡುಪಿ ಜಿಲ್ಲೆಯಲ್ಲಿ ಭಾನುವಾರ 40 ಮಂದಿಗೆ ಕೋವಿಡ್-19 ಸೋಂಕು ದೃಢವಾಗಿದ್ದು ಜನರ ಆತಂಕಕ್ಕೆ ಕಾರಣವಾಗಿದೆ.
ಇಂದಿನ 40 ಹೊಸ ಸೋಂಕಿತರ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 1179ಕ್ಕೆ ಏರಿಕೆಯಾಗಿದೆ. ಇವರಲ್ಲಿ 1051 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಬ್ಬರು ಮೃತಪಟ್ಟಿದ್ದು, ಸದ್ಯ ಜಿಲ್ಲೆಯಲ್ಲಿ 126 ಸಕ್ರಿಯ ಪ್ರಕರಣಗಳಿವೆ. ಸದ್ಯ ಸೋಂಕಿತರೆಲ್ಲರೂ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲೆಯ ಹೆಬ್ರಿಯ ಸಮುದಾಯ ಕೇಂದ್ರದ ವೈದ್ಯರು ಸಹಿತ ಏಳು ಮಂದಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಈ ಹಿನ್ನಲೆಯಲ್ಲಿ ಸಮುದಾಯ ಕೇಂದ್ರವನ್ನು ಸೀಲ್ ಡೌನ್ ಮಾಡಲಾಗಿದ್ದು, ಪಾಸಿಟಿವ್ ಬಂದ ಏಳು ಮಂದಿಯ ಮನೆಯನ್ನೂ ಸೀಲ್ ಡೌನ್ ಮಾಡಲಾಗಿದೆ.
Comments are closed.