ಉಡುಪಿ: ಚಿಕಿತ್ಸೆಗಾಗಿ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ದಾವಣಗೆರೆಯ ವ್ಯಕ್ತಿಯೊಬ್ಬರು ಶುಕ್ರವಾರ ಮೃತಪಟ್ಟಿದ್ದು ಅವರ ಗಂಟಲ ದ್ರವ ಪರೀಕ್ಷಾ ವರದಿಯಲ್ಲಿ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ ಎಂದು ತಿಳಿದುಬಂದಿದೆ.
ಆರೋಗ್ಯ ಸಮಸ್ಯೆಯ ಕಾರಣಕ್ಕಾಗಿ ಉಡುಪಿಯ ಖಾಸಗಿ ಆಸ್ಪತ್ರೆಗೆ ಜುಲೈ 9 ರಂದು ದಾವಣೆಗೆರೆಯ 70 ವರ್ಷದ ವೃದ್ಧರೊಬ್ಬರು ದಾಖಲಾಗಿದ್ದು ಅವರು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದಾರೆ. ಅವರ ಗಂಟಲ ದ್ರವ ಪರೀಕ್ಷೆ ಮಾಡಲಾಗಿದ್ದು ಪರೀಕ್ಷಾ ವರದಿಯಲ್ಲಿ ಕೋವಿಡ್ -19 ಪಾಸಿಟಿವ್ ಬಂದಿದೆ.
ಉಡುಪಿಯಲ್ಲೇ ಕೋವಿಡ್ ನಿಯಮಾವಳಿಯಂತೆ ಮೃತ ವ್ಯಕ್ತಿಯ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂದು ತಿಳಿದುಬಂದಿದೆ.
Comments are closed.