ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 ಕೊರೋನಾ ಸೋಂಕಿಗೆ 82 ವರ್ಷ ಪ್ರಾಯದ ವೃದ್ಧರೊಬ್ಬರು ಮೃತಪಟ್ಟಿದ್ದು ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
ಪಡುಬಿದ್ರಿ ನಿವಾಸಿಯಾದ 82 ವರ್ಷದ ವ್ಯಕ್ತಿಯು ಕಳೆದ ನಾಲ್ಕೈದು ದಿನಗಳ ಹಿಂದೆ ಉಸಿರಾಟದ ಸಮಸ್ಯೆ ಜೊತೆಗೆ ಕಿಡ್ನಿ, ಶ್ವಾಶಕೋಶದ ಸಮಸ್ಯೆಯಿಂದ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಈ ಸಂದರ್ಭ ಅವರ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿತ್ತು ಆದರೆ ಅವರು ಸೋಮವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಪರೀಕ್ಷಾ ವರದಿಯಲ್ಲಿ ಕೋವಿಡ್ ಸೋಂಕಿರುವುದು ದೃಢಪಟ್ಟಿದ್ದು ಅರೋಗ್ಯ ಇಲಾಖೆಯ ಸಿಬ್ಬಂದಿಗಳು ಮೃತರ ಅಂತ್ಯ ಸಂಸ್ಕಾರ ನಡೆಸಿದ್ದಾರೆ.
Comments are closed.