ಆರೋಗ್ಯ

ನಾಲ್ವರು ಸಿಬ್ಬಂದಿಗಳಿಗೆ ಕೊರೋನಾ ಪಾಸಿಟಿವ್: ಬೈಂದೂರು ಸಮುದಾಯ ಆರೋಗ್ಯ ಕೇಂದ್ರ ಸೀಲ್ ಡೌನ್

Pinterest LinkedIn Tumblr

ಕುಂದಾಪುರ: ಕೊರೋನಾ ವಾರಿಯರ್ಸ್ ಆಗಿ ಸೇವೆ ಸಲ್ಲಿಸುತ್ತಿರುವ ಆರೋಗ್ಯ ಇಲಾಖೆಯ ನಾಲ್ವರು ಸಿಬ್ಬಂದಿಗಳಿಗೆ ಕೊರೋನಾ ಪಾಸಿಟಿವ್ ದೃಢವಾಗಿದ್ದು ಬೈಂದೂರು ಸಮುದಾಯ ಆರೋಗ್ಯ ಕೇಂದ್ರವನ್ನು ಸೀಲ್ ಡೌನ್ ಮಾಡಲಾಗಿದೆ.

ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯದಲ್ಲಿದ್ದ ಇಬ್ಬರು ಸ್ಟಾಫ್ ನರ್ಸ್ ಹಾಗೂ ಇಬ್ಬರು ಡಿ ಗ್ರೂಫ್ ಸಿಬ್ಬಂದಿಗಳಿಗೆ ಕೊರೋನಾ ಪಾಸಿಟಿವ್ ದೃಢವಾಗಿದೆ. ಇವರೆಲ್ಲರಿಗೆ ಜ್ವರದ ಲಕ್ಷಣವಿದ್ದ ಹಿನ್ನಲೆ ಗಂಟಲು ದ್ರವ ಪರೀಕ್ಷೆ ಮಾಡಿಸಲಾಗಿತ್ತು. ಇವರ ಪೈಕಿ ಒಬ್ಬರ ವರದಿ ಎರಡು ದಿನದ ಹಿಂದೆ ಹಾಗೂ‌ ಮೂವರ ಕೋವಿಡ್-19 ವರದಿ ಸೋಮವಾರ ಬಂದಿದ್ದು ಎಲ್ಲರಿಗೂ‌ ಸೋಂಕಿರುವುದು ತಿಳಿದಿದೆ.

ಸದ್ಯ ಬೈಂದೂರು ಸಮುದಾಯ ಆರೋಗ್ಯ ಕೇಂದ್ರವನ್ನು‌ ಸ್ಯಾನಿಟೈಸ್ ಮಾಡಲಾಗಿದ್ದು ಮೂರು ದಿನಗಳ ಕಾಲ ಸೀಲ್ ಡೌನ್ ಮಾಡಲಾಗುತ್ತದೆ. ತಾತ್ಕಾಲಿಕವಾಗಿ ಆಸ್ಪತ್ರೆಯನ್ನು ಎಲ್ಲಿಗೆ ಸ್ಥಳಾಂತರ ಮಾಡುತ್ತಾರೆಂಬುದು ತಿಳಿದುಬಂದಿಲ್ಲ.

Comments are closed.