ನವದೆಹಲಿ: ಖಾಸಗಿ ವಾಹನದಲ್ಲಿ ಒಬ್ಬರೇ ಸಂಚರಿಸುವಾಗಲೂ ಕೂಡ ಕೋವಿಡ್-19 ನಿಯಮ ಪ್ರಕಾರ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ ಎಂದು ದೆಹಲಿ ಹೈಕೋರ್ಟ್ ಬುಧವಾರ ಆದೇಶ ಹೊರಡಿಸಿದೆ.
ಕೋವಿಡ್-19 ಸೋಂಕು ಹರಡುವಿಕೆಯಿಂದ ಮಾಸ್ಕ್ ಸುರಕ್ಷ ಕವಚವಾಗಿ ಕೆಲಸ ಮಾಡುತ್ತದೆ ಎಂದು ದೆಹಲಿ ಹೈಕೋರ್ಟ್ ನ ನ್ಯಾಯಮೂರ್ತಿ ಪ್ರತಿಭಾ ಎಂ ಸಿಂಗ್ ನೇತೃತ್ವದ ನ್ಯಾಯಪೀಠ ಪ್ರತಿಪಾದಿಸಿದೆ.
ಕಾರಿನಲ್ಲಿ ಒಬ್ಬರೇ ಪ್ರಯಾಣಿಸುವಾಗ ಮಾಸ್ಕ್ ಧರಿಸದವರಿಗೆ ಚಲನ್ ಗಳ ಹೇರಿಕೆ ಮಾಡುವ ದೆಹಲಿ ಸರ್ಕಾರದ ಆದೇಶದಲ್ಲಿ ಹಸ್ತಕ್ಷೇಪ ಮಾಡುವುದನ್ನು ಕೂಡ ನ್ಯಾಯಪೀಠ ನಿರಾಕರಿಸಿತು. ಖಾಸಗಿ ವಾಹನದಲ್ಲಿ ಒಬ್ಬರೇ ಕುಳಿತುಕೊಂಡು ಪ್ರಯಾಣಿಸುವಾಗಲೂ ಅವರು ಸಾರ್ವಜನಿಕ ಸ್ಥಳದಲ್ಲಿ ಓಡಾಡುತ್ತಿದ್ದಾರೆ ಎಂದು ಪರಿಗಣಿಸಬೇಕಾಗುತ್ತದೆ ಎಂದು ನ್ಯಾಯಪೀಠ ಹೇಳಿದೆ.
ದೇಶಾದ್ಯಂತ ಕೋವಿಡ್-19 ಎರಡನೇ ಅಲೆ ಸೃಷ್ಟಿಯಾಗಿದ್ದು, ಈ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಾಗುತ್ತದೆ, ಲಸಿಕೆ ಪಡೆದ ಮತ್ತು ಪಡೆಯದಿರುವ ಪ್ರತಿಯೊಬ್ಬರೂ ಮಾಸ್ಕ್ ಧರಿಸಬೇಕಾಗುತ್ತದೆ ಎಂದು ಹೇಳಿದೆ. ಮಾಸ್ಕ್ ಕೋವಿಡ್-19 ಹರಡುವುದನ್ನು ತಡೆಯುತ್ತದೆ ಎಂದು ನ್ಯಾಯಾಲಯ ಹೇಳಿದೆ.
Comments are closed.