ನವದೆಹಲಿ: ಕೆಲ ದಿನಗಳಿಂದ ಭಾರತದಲ್ಲಿ ಇಳಿಕೆಯಾಗಿದ್ದ ಮಹಾಮಾರಿ ಕೊರೋನಾ ಸೋಂಕು ಮತ್ತೆ ಏರಿಕೆಯಾಗುತ್ತಿದೆ. ದೇಶದಲ್ಲಿ ಶನಿವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 46,759 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 509 ಮಂದಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.
(ಸಾಂದರ್ಭಿಕ ಚಿತ್ರ)
ಶನಿವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,26,49,947ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,37,370ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,59,775ಕ್ಕೆ ತಲುಪಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 31,374 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,18,52,802ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ ದಿನ 17,61,110 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು ಈವರೆಗೆ 51,68,87,602 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
Comments are closed.