ಆರೋಗ್ಯ

‘ನೋ ವ್ಯಾಕ್ಸಿನ್, ನೋ ರೇಷನ್’: ಸರ್ಕಾರದ ಮುಖ್ಯ ಕಾರ್ಯದರ್ಶಿ ಸ್ಪಷ್ಟನೆ

Pinterest LinkedIn Tumblr

ಬೆಂಗಳೂರು: ‘ನೋ ವ್ಯಾಕ್ಸಿನ್, ನೋ ರೇಷನ್’ ಎಂಬ ಹೆಸರಿನಲ್ಲಿ ಹರಿದಾಡುತ್ತಿರುವ ಕೆಲ ಸುದ್ದಿಗಳು ಜನರಲ್ಲಿ ಗೊಂದಲ ಮೂಡಿಸಿವೆ. ಈ ಕುರಿತು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಗುರುವಾರ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಪತ್ರಿಕಾ ಪ್ರಕಟಣೆ ಮೂಲಕ ನೋ ವ್ಯಾಕ್ಸಿನ್, ನೋ ರೇಷನ್ ಹೆಸರಿನಲ್ಲಿ ಹರಿದಾಡುತ್ತಿರುವ ಸುದ್ದಿಗಳಿಗೆ ಸ್ಪಷ್ಟನೆ ನೀಡಿದ್ದಾರೆ.

ಸರ್ಕಾರದ ಯಾವುದೇ ಕಾರ್ಯಕ್ರಮ/ ಯೋಜನೆಗಳಿಗೆ ಕೋವಿಡ್ ಲಸಿಕಾ ಕಾರ್ಯಕ್ರಮವನ್ನು ಜೋಡಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪತ್ರದಲ್ಲಿರುವ ವಿಚಾರ..
ಇಂದಿನ ದಿನ ಪತ್ರಿಕೆಗಳಲ್ಲಿ ನೋ ವ್ಯಾಕ್ಸಿನ್, ನೋ ರೇಷನ್ ಎಂಬ ಶೀರ್ಷಿಕೆಯಡಿ ಕೋವಿಡ್ ಲಸಿಕೆ ಪಡೆಯದವರಿಗೆ ಪಿಂಚಣಿ ಮತ್ತು ಪಡಿತರವನ್ನು ನೀಡುವುದಿಲ್ಲವೆಂದು ವರದಿಯಾಗಿರುವುದು ತಿಳಿದುಬಂದಿರುತ್ತದೆ. ಸರ್ಕಾರದಿಂದ ಈ ರೀತಿ ಕೋವಿಡ್ ಲಸಿಕೆ ನೀಡುವುದನ್ನು ಸರ್ಕಾರದಿಂದ ನೀಡಲಾಗುವ ಪಡಿತರ, ಪಿಂಚಣಿ ಅಂತಹ ಯಾವುದೇ ಕಾರ್ಯಕ್ರಮ/ ಯೋಜನೆಗಳಿಗೆ ಜೋಡಿಸಿಲ್ಲವಾದ್ದರಿಂದ ಕೋವಿಡ್ ಲಸಿಕೆಯನ್ನು ಹಾಕಿಸಿಕೊಳ್ಳುವುದಕ್ಕೆ ಜನರಿಗೆ ಯಾವುದೇ ನಿರ್ಬಂಧನೆ ಹೇರಬಾರದು. ಜಾಗೃತಿ ಮೂಡಿಸುವ ಅಭಿಯಾನದ ಮೂಲಕ ಕೋವಿಡ್ ಲಸಿಕಾ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ/ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಈ ಮೂಲಕ ನಿರ್ದೇಶಿಸಲಾಗಿದೆ.

ಒಂದು ಪಕ್ಷ ಈ ರೀತಿಯಾಗಿ ಕೋವಿಡ್ ಲಸಿಕಾ ಕಾರ್ಯಕ್ರಮವನ್ನು ಯಾವುದೇ ಕಾರ್ಯಕ್ರಮ/ ಯೋಜನೆಗೆ ತಪ್ಪಾಗಿ ಜೋಡಿಸಿದ್ದಲ್ಲಿ ಅದನ್ನು ಕೂಡಲೇ ಕೈಬಿಡಬೇಕು ಎಂದು ನಿರ್ದೇಶಿಸಿದೆ ಎಂದು ರವಿ ಕುಮಾರ್ ಹೇಳಿದ್ದಾರೆ.

Comments are closed.