ಆರೋಗ್ಯ

ಉಡುಪಿ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ: ಡಿಸಿ ಕೂರ್ಮಾರಾವ್

Pinterest LinkedIn Tumblr

ಉಡುಪಿ: ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಲಾಗುವುದೆಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಆದೇಶ ಹೊರಡಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ವಾರಂತ್ಯದ ಕರ್ಫ್ಯೂ ಹೇಗಿರುತ್ತೆ..
ಜಿಲ್ಲೆಯಾದ್ಯಂತ ಈ ಹಿಂದೆ ಹೊರಡಿಸಿರುವ ಮಾರ್ಗಸೂಚಿಗಳನ್ವಯ ಪ್ರತಿ ದಿನ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ರಾತ್ರಿ ಕರ್ಪ್ಯೂ ಜಾರಿಯಲ್ಲಿರುತ್ತದೆ.

ಎಲ್ಲಾ ಕಛೇರಿಗಳು ವಾರದ 5 ದಿನಗಳು ಅಂದರೆ ಸೋಮವಾರದಿಂದ ಶುಕ್ರವಾರದವರೆಗೆ ಕಾರ್ಯಾಚರಿಸುವುದು .

ಜಿಲ್ಲೆಯಾದ್ಯಂತ ಶುಕ್ರವಾರ ರಾತ್ರಿ 10.00 ಗಂಟೆಗೆ ಮೊದಲ್ಗೊಂಡು ಸೋಮವಾರ ಬೆಳ್ಳಿಗ್ಗೆ 5.00 ಗಂಟೆಯ ವರೆಗೆ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿರುತ್ತದೆ. ಈ ಸಂಧರ್ಭದಲ್ಲಿ ಆದೇಶದಲ್ಲಿ ಲಗತ್ತಿಸಿರುವ ವಾರಾಂತ್ಯ ಕರ್ಫ್ಯೂಗೆ ಸಂಬಂಧಿತ ಮಾರ್ಗಸೂಚಿಗಳನ್ನು ಪಾಲಿಸತಕ್ಕದ್ದು.

ಸಾರ್ವಜನಿಕ ಸಾರಿಗೆ ಸಂಸ್ದೆಗಳು , ಬಿ.ಎಂ.ಆರ್.ಸಿ.ಎಲ್.ಗಳನ್ನೊಳಗೊಂಡು ಸದ್ರಿ ಸಂಸ್ದೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ನಿರ್ದೇಶನದನ್ವಯ ವಾರಾಂತ್ಯದಲ್ಲಿ ತುರ್ತು ಅವಶ್ಯಕತೆಯನುಸಾರ ಸಾರ್ವಜನಿಕರಿಗೆ ಸಂಚರಿಸಲು ಅನುಕೂಲವಾಗಲವಾಗುವ ನಿಟ್ಟಿನಲ್ಲಿ ಕಾರ್ಯಾಚರಿಸುವುದು.

ಪಬ್ ಗಳು / ಕ್ಲಬ್ ಗಳು /ರೆಸ್ಟೋರೆಂಟ್ ಗಳು/ ಬಾರ್ ಗಳು /ಹೋಟೇಲ್ ಗಳು / ಹೋಟೆಲ್ಗಳಲ್ಲಿ ಆಹಾರ ಸೇವಿಸಲು ಕಾಯ್ದಿರಿಸುವ ಸ್ಧಳಗಲ್ಲಿ ಶೇ. 50% ರಷ್ಟು ಆಸನ ಸಾಮರ್ಥ್ಯದೊಂದಿಗೆ ಕೋವಿಡ್ ಸೂಕ್ತ ನಡವಳಿಕೆಗೆ ಕಟ್ಟುನಿಟ್ಟಾಗಿ ಪಾಲಿಸುವುದರೊಂದಿಗೆ ಕಾರ್ಯಾ ನಿರ್ವಹಿಸುವುದು. ಹಾಗೂ 2 ಡೋಸ್ ಲಸಿಕೆಯನ್ನು ಪಡೆದಿರುವ ವ್ಯಕ್ತಿಗಳಿಗೆ ಮಾತ್ರ ಇಂತಹ ಸ್ದಳಗಳಿಗೆ ಪ್ರವೇಶ ಕಲ್ಪಿಸುವುದು.

ಸಿನಿಮಾ ಹಾಲ್/ಮಲ್ಟಿಪ್ಲೆಕ್ಸ್ /ಥಿಯೇಟರ್/ ರಂಗಮಂದಿರಗಳು/ ಅಡಿಟೋರಿಯಂ ಮತ್ತು ಇಂತಹ ಇತರ ಸ್ಧಳಗಲ್ಲಿ ಶೇ. 50% ರಷ್ಟು ಆಸನ ಸಾಮರ್ಥ್ಯದೊಂದಿಗೆ ಕೋವಿಡ್ ಸೂಕ್ತ ನಡವಳಿಕೆಗೆ ಕಟ್ಟುನಿಟ್ಟಾಗಿ ಪಾಲಿಸುವುದರೊಂದಿಗೆ ಕಾರ್ಯನಿರ್ವಹಿಸುವುದು ಹಾಗೂ ಎರಡು ಡೋಸ್ ಕೋವಿಡ್ -19 ಲಸಿಕೆ ಪಡೆದಿರುವಂತಹ ವ್ಯಕ್ತಿಗಳಿಗೆ ಮಾತ್ರ ಇಂತಹ ಸ್ದಳಗಳಿಗೆ ಪ್ರವೇಶ ಕಲ್ಪಿಸುವುದು.

ತೆರೆದ ಪ್ರದೇಶಗಳಲ್ಲಿ ನಡೆಸುವ ಮದುವೆ ಕಾರ್ಯಕ್ರಮಕ್ಕೆ 200 ಜನರು ಮೀರದಂತೆ ಹಾಗೂ ಹಾಲ್ ಗಳಲ್ಲಿ ನಡೆಸುವ ಮದುವೆ ಕಾರ್ಯಕ್ರಮಕ್ಕೆ 100 ಜನರು ಪಾಲ್ಗೊಳ್ಳಲು ಮಾತ್ರ ಅವಕಾಶ ಹಾಗೂ ಈ ಸಂಧರ್ಭದಲ್ಲಿ ಕೋವಿಡ್ ಸೂಕ್ತ ನಡವಳಿಕೆಗೆ ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು.

ಧಾರ್ಮಿಕ ಸ್ಧಳಗಳಲ್ಲಿ ದರ್ಶನಕ್ಕೆ ಮಾತ್ರ ತೆರೆಯಲು ಅವಕಾಶ . ಯಾವುದೇ ರೀತಿಯಲ್ಲಿ ಸೇವೆ ಹಾಗೂ ಮತ್ತಿತರ ಚಟುವಟಿಕೆಗಳಿಗೆ ಅವಕಾಶವಿರುವುದಿಲ್ಲ ಏಕ ಕಾಲದಲ್ಲಿ 2 ಡೋಸ್ ಲಸಿಕೆಯನ್ನು ಪಡೆದಿರುವ 50 ಜನರಿಗೆ ಮಾತ್ರ ಪ್ರವೇಶ ಕಲ್ಪಿಸುವುದು.

ಮಾಲ್ ಗಳು, ಶಾಫಿಂಗ್ ಕಟ್ಟಡಗಳು , ಎಲ್ಲಾ ರೀತಿಯ ಸ್ವಯಂ ಅಂಗಡಿಗಳು ಹಾಗೂ ಸ್ದಾಪನೆಗಳು ವಾರದ ದಿನಗಳಲ್ಲಿ ಎಂದಿನಂತೆ ಕಾರ್ಯಾಚರಿಸುವುದು.
ಸ್ವಿಮ್ಮಿಂಗ್ ಪೂಲ್ ಮತ್ತು ಜಿಮ್ ಗಳು ಶೇ 50 ರ ಸಾಮರ್ಥ್ಯ ದೊಂದಿಗೆ ಕಾರ್ಯಾಚರಿಸುವುದು ಹಾಗೂ 2 ಡೋಸ್ ಲಸಿಕೆಯನ್ನು ಪಡೆದಿರುವ ಜನರಿಗೆ ಮಾತ್ರ ಪ್ರವೇಶ ಕಲ್ಪಿಸುವುದು.

ಕ್ರೀಡಾ ಸಂಕೀರ್ಣಗಳು ಮತ್ತು ಸ್ಟೇಡಿಯಂಗಳ ಶೇ 50 % ಸಾಮರ್ಥ್ಯಕ್ಕೆ ಒಳಪಟ್ಟು ಕಾರ್ಯಾಚರಿಸುವುದು.
ಎಲ್ಲಾ ರ‍್ಯಾಲಿಗಳನ್ನು, ಧರಣಿಗಳನ್ನು , ಪ್ರತಿಭಟನೆಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ.

ಕೇರಳ ರಾಜ್ಯದಿಂದ ಹಾಗೂ ಮಹಾರಾಷ್ಟ್ರ ರಾಜ್ಯದಂತಹ ಗಡಿ ರಾಜ್ಯಗಳಿಂದ ಜಿಲ್ಲೆಗೆ ಆಗಮಿಸುವವರನ್ನು ಪತ್ತೆ ಹಚ್ಚಿ ಅಗತ್ಯ ಕ್ರಮವಹಿಸಲು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಹೊರಡಿಸಲಾಗಿರುವ ಸುತ್ತೋಲೆ/ ನಿರ್ದೇಶನವನ್ನು ಪಾಲಿಸುವುದು. ಹಾಗೂ ಸದರಿ ಮಾರ್ಗಸೂಚಿಗಳನ್ನು ಗೋವಾ ರಾಜ್ಯದಿಂದ ಜಿಲ್ಲೆಗೆ ಆಗಮಿಸುವವರಿಗೂ ವಿಸ್ತರಿಸಲಾಗಿದೆ.

ಕೋವಿಡ್-19 ಸಾಂಕ್ರಾಮಿಕ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರವು ಹೊರಡಿಸಿದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು. ಅಲ್ಲದೇ, ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಇತರೆ ಇಲಾಖೆಗಳಿಂದ ಹೊರಡಿಸಲಾದ ಸೂಚನೆಗಳು/ ಮಾರ್ಗಸೂಚಿಗಳು/ ಪುಮಾಣಿತ ಕಾರ್ಯ ವಿಧಾನ( SOP) ಗಳನ್ನು ಸಹ ಕಡ್ಡಾಯವಾಗಿ ಪಾಲಿಸತಕ್ಕದ್ದು.

ಮೇಲಿನ ಆದೇಶಗಳನ್ನು ಪಾಲಿಸದೇ ಇದ್ದವರ ಮೇಲೆ ಪೋಲಿಸ್ ಠಾಣೆಗಳಲ್ಲಿ ಕ್ರಿಮಿನಲ್ ಪ್ರಕರಣಗಳನ್ನು, Disaster Management Act 2005 , Karnataka Epidemic Diseases act 2020 ಮತ್ತು IPC ಸೆಕ್ಷನ್ 188 ಪ್ರಕಾರ ನಿಯಮಾನುಸಾರ ಕಠಿಣ ಕ್ರಮಕೈಗೊಳ್ಳಲಾಗುವುದು. ಈ ಆದೇಶವನ್ನು ದಿನಾಂಕ:05.01.2022 ರಂದು ನನ್ನ ಸ್ವಹಸ್ತಾಕ್ಷರ ಮತ್ತು ಮುದ್ರೆಯೊಂದಿಗೆ ಹೊರಡಿಸಲಾಗಿದೆ.

Comments are closed.