ಆರೋಗ್ಯ

ಕಂದಾಯ ಸಚಿವ ಆರ್.ಅಶೋಕ್ ಅವರಿಗೆ ಕೋವಿಡ್-19 ಸೋಂಕು ದೃಢ; ಮಣಿಪಾಲ್ ಆಸ್ಪತ್ರೆಗೆ ದಾಖಲು

Pinterest LinkedIn Tumblr

ಬೆಂಗಳೂರು: ರಾಜ್ಯದ ಕಂದಾಯ ಸಚಿವ ಆರ್.ಅಶೋಕ್ ಅವರಿಗೆ ಕೋವಿಡ್ 19 ಸೋಂಕು ದೃಢವಾಗಿದೆ. ಶೀತ, ಜ್ವರದಿಂದ ಬಳಲುತ್ತಿರುವ ಅವರನ್ನು ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು “ನನಗೆ ಕೋವಿಡ್ ದೃಢವಾಗಿದ್ದು, ಆರೋಗ್ಯವಾಗಿದ್ದೇನೆ ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ” ಎಂದು ಬರೆದುಕೊಂಡಿದ್ದಾರೆ. ಜನವರಿ 6ರ ಗುರುವಾರ ನಡೆದ  ಸಚಿವ  ಸಂಪುಟ ಸಭೆಗೂ ಅಶೋಕ್ ಗೈರಾಗಿದ್ದರು. ಎರಡು ದಿನದ ಹಿಂದೆ ಅಂದರೆ ಜನವರಿ 5 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಇತರೆ ಸಚಿವರೊಂದಿಗೆ ಕಚೇರಿಯಲ್ಲಿ ಕೊರೊನಾ ಜಾಗೃತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಬಳಿಕ ಸುದ್ದಿಗೋಷ್ಟಿಯನ್ನುದ್ದೇಶಿಸಿ ಅವರು ಮಾತನಾಡಿದ್ದರು.

ಇನ್ನು ಕರ್ನಾಟಕದಲ್ಲಿ ಕೊರೊನಾ ಹಾಗೂ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಸೋಂಕು ನಿಯಂತ್ರಿಸಲು ಸರ್ಕಾರ ರಾಜ್ಯದಲ್ಲಿ ನೈಟ್ ಕರ್ಫ್ಯೂ ವಿಧಿಸಿದ್ದು, ಶುಕ್ರವಾರ ರಾತ್ರಿ 10ಗಂಟೆಯಿಂದ ಸೋಮವಾರ ಬೆಳಗಿನ ಜಾವ 5 ಗಂಟೆಯವರೆಗೂ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರಲಿದೆ.

 

Comments are closed.