ಉಡುಪಿ: ಉಡುಪಿ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ನಿರ್ವಹಣೆಯನ್ನು ಸರ್ಕಾರ ಅಧೀಕೃತವಾಗಿ ತನ್ನ ಸುಪರ್ದಿಗೆ ತೆಗೆದುಕೊಂಡಿದೆ.
ರಾಜ್ಯ ಬಿಜೆಪಿ ಸರ್ಕಾರದ ಸಚಿವ ಸಂಪುಟ ಸಭೆಯ ನಿರ್ಣಯದಂತೆ ಸರ್ಕಾರದ ಸುಪರ್ದಿಗೆ ಪಡೆದು ಅಧಿಕೃತ ಸರ್ಕಾರಿ ಆದೇಶ ಹೊರಡಿಸಲಾಗಿದೆ.
ಆಸ್ಪತ್ರೆಯ ನಿರ್ವಹಣೆಯನ್ನು ಸರ್ಕಾರದ ಸುಪರ್ದಿಗೆ ಪಡೆಯುವಂತೆ ಶಾಸಕ ರಘುಪತಿ ಭಟ್ ಅವರು ಇಲಾಖೆ ಮಟ್ಟದಲ್ಲಿ ನಿರಂತರವಾಗಿ ಪ್ರಯತ್ನಿಸಿದ್ದರಲ್ಲದೆ, ವಿಧಾನಸಭಾ ಅಧಿವೇಶನದಲ್ಲಿ ಧ್ವನಿ ಎತ್ತಿದ್ದರು. ಇದೀಗ ಇದನ್ನು ನೆರವೇರಿಸಿದ್ದಕ್ಕಾಗಿ ಬೊಮ್ಮಾಯಿ ಸರ್ಕಾರಕ್ಕೆ ಕೃತಜ್ಞತೆ ಅರ್ಪಿಸುವುದಾಗಿ ರಘುಪತಿ ಭಟ್ ಟ್ವೀಟರ್‌ನಲ್ಲಿ ಬರೆದುಕೊಂಡಿದ್ದಾರೆ.
Comments are closed.