ಆರೋಗ್ಯ

ರಾಜ್ಯದಲ್ಲಿ ಕೊರೋನಾ ಪ್ರಕರಣದಲ್ಲಿ ಏರಿಳಿತ; ಓರ್ವ ಮೃತ್ಯು

Pinterest LinkedIn Tumblr

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 623 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,60,831ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಭಾನುವಾರ ಒಬ್ಬರು ಮೃತಪಟ್ಟಿದ್ದು. ಇದರೊಂದಿಗೆ ಸಾವಿನ ಸಂಖ್ಯೆ 40,071 ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ನಿನ್ನೆ 588 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,96,042ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲಿ ಕೊರೋನಾದಿಂದ ಯಾರು ಮೃತಪಟ್ಟಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ನಿನ್ನೆ 412 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,15,683ಕ್ಕೆ ಏರಿಕೆಯಾಗಿದೆ. ಇನ್ನು 5,035 ಸಕ್ರಿಯ ಪ್ರಕರಣಗಳಿವೆ.

 

Comments are closed.