ಆರೋಗ್ಯ

ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸ; ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ ಮೇಣದ ಬತ್ತಿ ನಡಿಗೆ

Pinterest LinkedIn Tumblr

ಮಣಿಪಾಲ:‌ ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜು ಮತ್ತು ಕಸ್ತೂರ್ಬಾ ಆಸ್ಪತ್ರೆ, ಆಕ್ಸೆಸ್ ಲೈಫ್ ಅಸಿಸ್ಟೆನ್ಸ್ ಫೌಂಡೇಶನ್ ಸಹಯೋಗದೊಂದಿಗೆ ಸೆಪ್ಟೆಂಬರ್ 24 ರಂದು ಬಾಲ್ಯದ ಕ್ಯಾನ್ಸರ್ ಗೆ ಸೂಚಕವಾದ ಚಿನ್ನದ ಬಣ್ಣದಲ್ಲಿ ರೂಪಾಂತರಗೊಂಡಿತು. ಬಾಲ್ಯದ ಕ್ಯಾನ್ಸರ್ ಗಳನ್ನು ಆರಂಭಿಕ ಹಂತದಲ್ಲಿ ಪತ್ತೆಮಾಡಿ ಮತ್ತು ತಜ್ಞ ವೈದ್ಯರ ತಂಡದ ಮೂಲಕ ಸರಿಯಾದ ಸಮಯದಲ್ಲಿ ಚಿಕಿತ್ಸೆ ದೊರೆತರೆ ಸಂಪೂರ್ಣವಾಗಿ ಗುಣಪಡಿಸಬಹುದಾಗಿದೆ.

ಸೆಪ್ಟೆಂಬರ್ ತಿಂಗಳು ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸವಾಗಿದ್ದು, ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲದ ಮಕ್ಕಳ ರಕ್ತಶಾಸ್ತ್ರ ಮತ್ತು ಆಂಕೊಲಾಜಿ ವಿಭಾಗವು ಆಕ್ಸೆಸ್ಲೈಫ್ ಅಸಿಸ್ಟೆನ್ಸ್ ಫೌಂಡೇಶನ್ ಸಹಯೋಗದೊಂದಿಗೆ ಬಾಲ್ಯದ ಕ್ಯಾನ್ಸರ್ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಮೇಣದಬತ್ತಿ ನಡಿಗೆ ಕಾರ್ಯಕ್ರಮ ಏರ್ಪಡಿಸಿತ್ತು. ವಿಭಾಗದ ಮುಖ್ಯಸ್ಥ ಡಾ.ವಾಸುದೇವ ಭಟ್ ಕೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ”ಭಾರತದಲ್ಲಿ ಪ್ರತಿ ವರ್ಷ ಸುಮಾರು 78,000 ಮಕ್ಕಳು ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ನಮ್ಮ ದೇಶದಲ್ಲಿ ವಿಳಂಬವಾಗಿ ಪತ್ತೆಮಾಡುವುದು, ನುರಿತ ತಜ್ಞರಲ್ಲಿಗೆ ಬರುವಾಗ ತಡವಾಗುವುದು ಮತ್ತು ಕ್ಯಾನ್ಸರ್ ಒಂದು ಕಳಂಕ ಎನ್ನುವ ಮನೋಬಾವದ ಕಾರಣದಿಂದ ಗುಣವಾಗುವ ದರದಲ್ಲಿ ಕಡಿಮೆ ಇದೆ ” ಎಂದರು.

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಡೀನ್ ಡಾ.ಶರತ್ ಕುಮಾರ್ ರಾವ್ ಅವರು ಬಾಲ್ಯದ ಕ್ಯಾನ್ಸರ್ ಜಾಗೃತಿ ಕುರಿತು ಕರಪತ್ರ ಬಿಡುಗಡೆ ಮಾಡಿ ಮಾತನಾಡಿ ‘ಚಿನ್ನವು ಅಮೂಲ್ಯವಾದ ಲೋಹವನ್ನು ಸಾಂಕೇತಿಸುವುದರಿಂದ ಆಸ್ಪತ್ರೆಯ ಆವರಣವನ್ನು ಚಿನ್ನದಂತ ಬೆಳಕಿನಿಂದ ಬೆಳಗಿಸಲಾಗಿದೆ ಮತ್ತು ನಮ್ಮ ಜೀವನದಲ್ಲಿ ಅತ್ಯಮೂಲ್ಯವಾದ ವಸ್ತು ಅಂದರೆ ನಮ್ಮ ಮಕ್ಕಳನ್ನು ಪ್ರತಿಬಿಂಬಿಸಲು ಇದು ಪರಿಪೂರ್ಣ ಬಣ್ಣವಾಗಿದೆ’ ಎಂದು ಹೇಳಿದರು.

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಅವರು ,ಆಸ್ಪತ್ರೆಯು ಕ್ಯಾನ್ಸರ್ ಪೀಡಿತ ಮಕ್ಕಳಿಗೆ ಯಾವುದೇ ಅಡೆತಡೆಗಳಿಲ್ಲದೆ ಚಿಕಿತ್ಸೆಯನ್ನು ಪೂರ್ಣಗೊಳಿಸಲು ಅವರಿಗೆ ಸಮಗ್ರ ಆರೈಕೆಯನ್ನು ಖಚಿತಪಡಿಸುತ್ತದೆ ಎಂದು ಹೇಳಿದರು.

ನಡಿಗೆಯು ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಮುಖ್ಯ ದ್ವಾರದಿಂದ ಹೊರಟು ಟೈಗರ್ ಸರ್ಕಲ್ ಮೂಲಕ ಆಕ್ಸೆಸ್ಲೈಫ್ ಮಾಹೆ ಮಣಿಪಾಲದವರೆಗೆ ನಡೆಯಿತು. ಈ ಕಾರ್ಯಕ್ರಮಕ್ಕೆ ಆಸ್ಪತ್ರೆಯ ಆರೋಗ್ಯ ಕಾರ್ಯಕರ್ತರು ಮತ್ತು ಸ್ವಯಂಸೇವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕ್ಯಾನ್ಸರ್ ನಿಂದ ಬಳಲುತ್ತಿರುವ ಮಕ್ಕಳು ಮತ್ತು ಅವರ ಆರೈಕೆ ಮಾಡುವವರ ಬೆಂಬಲದ ಸಂಕೇತವನ್ನು ತೋರಿಸಲು ಸಾಕ್ಷಿಯಾದರು.

ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಅರ್ಚನಾ ಎಂ. ವಿ. ಅವರು ಕಾರ್ಯಕ್ರಮ ನಿರೂಪಿಸಿದರು.

Comments are closed.