(ವರದಿ- ಯೋಗೀಶ್ ಕುಂಭಾಸಿ)
ಕುಂದಾಪುರ: ಕರ್ನಾಟಕ ಸರಕಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಜಿಲ್ಲಾ ಮಟ್ಟದಲ್ಲಿ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ-ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ಯೋಜನೆಯಡಿ ‘ಅತ್ಯುತ್ತಮ ಕಾರ್ಯಕ್ಷಮತೆ’ ಮಾಡಿರುವುದನ್ನು ಪರಿಗಣಿಸಿ ‘ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆ’ಗೆ ‘ಅತ್ಯುತ್ತಮ ಕಾರ್ಯಕ್ಷಮತೆ’ ಪ್ರಮಾಣ ಪತ್ರ ಲಭಿಸಿದ್ದು ತಾಲೂಕು ಆಸ್ಪತ್ರೆಗೆ ಮೂರನೇ ಬಾರಿ ಪ್ರಮಾಣಪತ್ರ ಪಡೆದುಕೊಂಡಿದೆ.
ಜ.26 ರಂದು ಉಡುಪಿಯ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 75ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಆರ್. ಹೆಬ್ಬಾಳ್ಕರ್ ಉಡುಪಿಯ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಮಾಣಪತ್ರ ಹಸ್ತಾಂತರಿಸಿದ್ದು ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಮುಖ್ಯ ಆಡಳಿತ ಶಸ್ತ್ರಚಿಕಿತ್ಸಕರಾದ ಡಾll ರೋಬರ್ಟ್ ರೆಬೆಲ್ಲೋ ಪ್ರಮಾಣಪತ್ರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಯಶ್‌ಪಾಲ್ ಎ ಸುವರ್ಣ, ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್.ಕೆ, ಹೆಚ್ಚುವರಿ ಎಸ್ಪಿ ಕೆ.ಟಿ. ಸಿದ್ದಲಿಂಗಪ್ಪ, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್., ಜಿಲ್ಲಾ ಆರೋಗ್ಯಾಧಿಕಾರಿ ಐ.ಪಿ.ಗಡದ್, ಕುಷ್ಠರೋಗ ನಿವಾರಣಾಧಿಕಾರಿ ಡಾ. ಲತಾ ನಾಯಕ್ ಉಪಸ್ಥಿತರಿದ್ದರು.
Comments are closed.