India

ರಾಜೀವ್ ಪ್ರತಾಪ್ ರೂಡಿ ಅವರಿಗೆ ರಾಜ್ಯ ಸಚಿವ ಸ್ಥಾನ

Pinterest LinkedIn Tumblr

Rajiv-PratapRudy

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಕೇಂದ್ರ ಸಂಪುಟ ಪುನಾರಚನೆ ಕಾರ್ಯಗಳು ಆರಂಭವಾಗಿದ್ದು, ಬಿಜೆಪಿ ಸಂಸದ ರಾಜೀವ್ ಪ್ರತಾಪ್ ರೂಡಿ ಅವರಿಗೆ ರಾಜ್ಯ ಸಚಿವ (ಸ್ವತಂತ್ರ ಖಾತೆ) ಸ್ಥಾನ ಲಭಿಸಿದೆ.

ರೂಡಿ ಅವರು ಬಿಹಾರದ ಸರನ್ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧೀಕರಿಸುತ್ತಿದ್ದಾರೆ.

ಸಚಿವ ಸ್ಥಾನ ಲಭಿಸಿರುವ ಬಗ್ಗೆ ರೂಡಿ ಅವರು ಮೋದಿ ಸಚಿವ ಸಂಪುಟದಲ್ಲಿ ರಾಜ್ಯ ಸಚಿವರಾಗಿ ಕಾರ್ಯ ನಿರ್ವಹಿಸುವ ಮೂಲಕ ದೇಶ ಸೇವೆ ಮಾಡಲು ನನಗೆ ಸುಯೋಗ ಕೂಡಿಬಂದಿದೆ ಎಂದು  ಟ್ವೀಟ್ ಮಾಡಿದ್ದಾರೆ.

ಸಂಪುಟ ವಿಸ್ತರಣೆಯಾದ ನಂತರ ಇಂದು ರಾಷ್ಟ್ರಪತಿ ಭವನದ ದರ್ಬಾಲ್ ಹಾಲ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮ. 1.30 ಗಂಟೆಗೆ ಸರಿಯಾಗಿ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

Write A Comment