International

ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ಔಟ್ ನೋಟಿಸ್ ಜಾರಿಗೊಳಿಸಿದ ಎಸ್ಐಟಿ

Pinterest LinkedIn Tumblr

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಎಸ್ಐಟಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್ ಹೊರಡಿಸಿದ್ದಾರೆ.

ಹೊಳೆನರಸೀಪುರ ಟೌನ್ ಠಾಣೆಯಲ್ಲಿ ದಾಖಲಾಗಿರುವ‌ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಮೊದಲನೇ (ಎ1) ಆರೋಪಿ ಹಾಗೂ ಅವರ ಮಗ ಪ್ರಜ್ವಲ್ ರೇವಣ್ಣ (ಎ2) ಆರೋಪಿಗಳಾಗಿದ್ದಾರೆ.

ಪ್ರಕರಣ ದಾಖಲಾಗುವ‌ ಮುನ್ನವೇ ಪ್ರಜ್ವಲ್‌ ದೇಶದಿಂದ‌ ಪರಾರಿಯಾಗಿದ್ದಾರೆ. ವಿಚಾರಣೆಗೆ ನೋಟಿಸ್ ನೀಡಿದರೂ ಹಾಜರಾಗಿಲ್ಲ.

ಪ್ರಜ್ವಲ್ ವಿದೇಶದಲ್ಲಿರುವ ಬಗ್ಗೆ ಎಸ್ಐಟಿ ಅಧಿಕಾರಿಗಳು ಮಾಹಿತಿ ಕಲೆ‌ ಹಾಕಿದ್ದಾರೆ. ಪ್ರಜ್ವಲ್ ಪತ್ತೆಗಾಗಿ‌ ಲುಕ್ ಔಟ್ ನೋಟಿಸ್ ಜಾರಿ‌ ಮಾಡಿ, ವಿಮಾನ ನಿಲ್ದಾಣದ ಅಧಿಕಾರಿಗಳು ಹಾಗೂ ಅಂತರಾಷ್ಟ್ರೀಯ ತನಿಖಾ ಸಂಸ್ಥೆಗಳಿಗೆ ರವಾನಿಸಿದ್ದಾರೆ ಎನ್ನಲಾಗಿದೆ.

ಪ್ರಜ್ವಲ್ ಎಲ್ಲೇ ಕಂಡರೂ ವಶಕ್ಕೆ ಪಡೆಯಲು ಸೂಚನೆ ನೀಡಿದೆ. ಪ್ರಪಂಚದ ಎಲ್ಲಾ ಏರ್ ಪೋರ್ಟ್ ಗಳಿಗೂ ನೋಟಿಸ್ ರವಾನೆ ಮಾಡಲಾಗಿದೆ ಎನ್ನಲಾಗಿದೆ. ಎಸ್ಐಟಿ ಇಂಟರ್ ಪೋಲ್ ಸಹಾಯ ಕೇಳಿದ್ದು, ಪ್ರಜ್ವಲ್ ರೇವಣ್ಣ ವಾಪಸ್ ಆಗುವ ವೇಳೆ ವಶಕ್ಕೆ ಪಡೆಯಲು ಎಸ್ಐಟಿ ಸಿದ್ದತೆ ನಡೆಸಿದೆ ಎನ್ನಲಾಗಿದೆ.

ಲುಕ್‌ಔಟ್ ನೋಟಿಸ್ ಬಳಿಕವೂ ಪ್ರಜ್ವಲ್‌ ಪತ್ತೆಯಾಗದಿದ್ದರೆ, ಆತನ ಪತ್ತೆಗೆ ನ್ಯಾಯಾಲಯದಿಂದ ಜಾಮೀನು ರಹಿತ ವಾರೆಂಟ್ ಜಾರಿಯಾಗುವ ಸಾಧ್ಯತೆ ಇದೆ ಎಂದು ಕೂಡ ಹೇಳಲಾಗುತ್ತಿದೆ.

 

Comments are closed.