ನವದೆಹಲಿ: ಭಾರತೀಯ ಚಿತ್ರರಂಗದ ಖ್ಯಾತ ಹಾಸ್ಯ ನಟ ರಾಜು ಶ್ರೀವಾಸ್ತವ ಅವರು ನಿಧನರಾಗಿದ್ದಾರೆ. ಅವರಿಗೆ 58 ವರ್ಷ ವಯಸ್ಸಾಗಿತ್ತು.
ಹಲವು ದಿನಗಳಿಂದ ರಾಜು ಶ್ರೀವಾಸ್ತವ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆಗಸ್ಟ್ 10ರಂದು ದೆಹಲಿಯ ಜಿಮ್ನಲ್ಲಿ ವರ್ಕೌಟ್ ಮಾಡುವಾಗ ರಾಜುಗೆ ಹೃದಯಾಘಾತವಾಯಿತು. ನಂತರ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಕಳೆದ ಒಂದು ವಾರದಿಂದ ಅವರಿಗೆ ಇಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಹಿಂದಿ ಚಿತ್ರರಂಗದಿಂದ ರಾಜು ಶ್ರೀವಾಸ್ತವ ಬಣ್ಣದ ಬದುಕು ಆರಂಭಿಸಿದರು. ‘ಮೈನೆ ಪ್ಯಾರ್ ಕಿಯಾ’, ‘ಬಾಜಿಗರ್’, ‘ಬಾಂಬೆ ಟು ಗೋವಾ’ ಮೊದಲಾದ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ನಂತರ ಸ್ಟ್ಯಾಂಡಪ್ ಕಾಮಿಡಿಯನ್ ಆಗಿಯೂ ಗುರುತಿಸಿಕೊಂಡರು. ‘ದಿ ಗ್ರೇಟ್ ಇಂಡಿಯನ್ ಲಾಫ್ಟರ್ ಚಾಲೆಂಜ್’ನಲ್ಲಿ ಎರಡನೇ ರನ್ನರ್ ಅಪ್ ಆದರು. ಹಿಂದಿ ಬಿಗ್ ಬಾಸ್ನ ಮೂರನೇ ಸೀಸನ್ಗೆ ಅವರು ಸ್ಪರ್ಧಿ ಆಗಿದ್ದರು. ‘ಕಾಮಿಡಿ ಕಾ ಮಹಾ ಮುಕ್ಬಾಲ್’, ‘ನಾಚ್ ಬಲಿಯೇ’ ರಿಯಾಲಿಟಿ ಶೋನ ಆರನೇ ಸೀಸನ್ಗೆ ಅವರು ಸ್ಪರ್ಧಿ ಆಗಿದ್ದರು. ಸ್ಟ್ಯಾಂಡಪ್ ಕಾಮಿಡಿ ಲೋಕದಲ್ಲಿ ರಾಜು ಶ್ರೀವಾಸ್ತವ ಅವರು ಅಪಾರ ಜನಪ್ರಿಯತೆ ಗಳಿಸಿದ್ದರು.
ರಾಜು ಶ್ರೀವಾಸ್ತವ ಅವರ ನಿಧನಕ್ಕೆ ಅಭಿಮಾನಿಗಳು, ಸ್ನೇಹಿತರು ಹಾಗೂ ಸೆಲೆಬ್ರಿಟಿಗಳು ಕಂಬಿನಿ ಮಿಡಿಯುತ್ತಿದ್ದಾರೆ. ಬಾಲಿವುಡ್ನ ಅನೇಕ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ.
Comments are closed.