Mumbai

ಮಹಾರಾಷ್ಟ್ರದಲ್ಲಿ ಭೀಕರ ದುರಂತ: ಚಲಿಸುತ್ತಿದ್ದ ಬಸ್​ಗೆ ಬೆಂಕಿ: 26 ಮಂದಿ ಸಜೀವ ದಹನ, ಹಲವರಿಗೆ ಗಾಯ

Pinterest LinkedIn Tumblr

ಮುಂಬೈ: ಚಲಿಸುತ್ತಿದ್ದ ಬಸ್ಸಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಪರಿಣಾಮ 26 ಮಂದಿ ಸಜೀವ ದಹನವಾಗಿದ್ದು 7 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಮಹಾರಾಷ್ಟ್ರ ಸಮೃದ್ಧಿ ಮಹಾಮಾರ್ಗ್ ಎಕ್ಸ್‌ಪ್ರೆಸ್ ಹೈವೇಯಲ್ಲಿ ಶನಿವಾರ ನಡೆದಿದೆ. ಇಂದು ಬೆಳಗಿನ ಜಾವ 2 ಗಂಟೆಗೆ ಸುಮಾರಿಗೆ ಈ ಭೀಕರ ಅಪಘಾತ ಸಂಭವಿಸಿದೆ.

ಬುಲ್ಧಾನ ಜಿಲ್ಲೆಯ ಸಿಂಧಖೇದರಾಜ ಬಳಿಯ ಪಿಂಪಲಖುಟಾ ಗ್ರಾಮದ ಬಳಿ ಸಮೃದ್ಧಿ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಈ ಬಸ್ ನಾಗ್ಪುರದಿಂದ ಪುಣೆಗೆ ಹೋಗುತ್ತಿತ್ತು ಎನ್ನಲಾಗಿದೆ.

ಸಿಂಧಖೇಡರಾಜ ಸಮೀಪದ ಪಿಂಪಲಖುಟಾ ಗ್ರಾಮದ ಬಳಿ ಸಮೃದ್ಧಿ ಹೆದ್ದಾರಿಯಲ್ಲಿ ಬಸ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ಬಸ್’ಗೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಕಾಣಿಸಿಕೊಂಡ ನಂತರ ಕೇವಲ ಎಂಟು ಮಂದಿ ಪ್ರಯಾಣಿಕರು ಮಾತ್ರ ಹೊರಬರಲು ಸಾಧ್ಯವಾಗಿದೆ. ಇನ್ನುಳಿದ 25 ಮಂದಿ ಪ್ರಯಾಣಿಕರು ಸಜೀವ ದಹನವಾಗಿದ್ದಾರೆ.

ಬಸ್​ಗೆ ಬೆಂಕಿ ಬಿದ್ದ ಸುದ್ದಿ ತಿಳಿದ ಪೊಲೀಸರು ಮತ್ತು ಅಗ್ನಿ ಶಾಮಕದಳ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರು. ಬಸ್ಸಿನಿಂದ 25 ಮೃತದೇಹಗಳನ್ನು ಹೊರತೆಗೆದು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಅಲ್ಲದೆ, ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಗೊಂಡಿದ್ದ 8 ಮಂದಿಯ ಪೈಕಿ ಇದೀಗ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಇದರೊಂದಿಗೆ ಮೃತರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ.

ಘಟನೆ ವೇಳೆ ಬಸ್ಸಿನಲ್ಲಿ ಒಟ್ಟು 33 ಜನರು ಪ್ರಯಾಣಿಸುತ್ತಿದ್ದರು ಎಂದು ಎನ್ನಲಾಗಿದೆ. ಗಾಯಾಳುಗಳನ್ನು ಬುಲ್ಧಾನ ಸಿವಿಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಬಸ್‌ನಿಂದ 25 ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಬಸ್ಸಿನಿಂದ ಹೊರತೆಗೆದ ಮೃತದೇಹಗಳನ್ನು ಗುರುತಿಸುವುದು ಕಷ್ಟವಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಈ ಘಟನೆ ಕುರಿತು ಬುಲ್ಧಾನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮೃತರ ಸಂಬಂಧಿಗಳಿಗೆ ಮಾಹಿತಿ ರವಾನಿಸಲಾಗುತ್ತಿದೆ.

Comments are closed.