ಮುಂಬಯಿ: ವಿವಾದಗಳಿಂದಲೇ ಹೆಸರಾಗಿದ್ದ ಬಾಲಿವುಡ್ ನಟಿ, ಮಾಡೆಲ್ ಪೂನಂ ಪಾಂಡೆ ನಿಧನರಾಗಿದ್ದಾರೆ. ಈ ಸುದ್ದಿಯನ್ನು ಅವರ ಮ್ಯಾನೇಜರ್ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಖಚಿತಪಡಿಸಿದ್ದಾರೆ.
32 ವರ್ಷದ ಪೂನಂ ಪಾಂಡೆ ಗರ್ಭಕೋಶ ಕ್ಯಾನ್ಸರ್ ನಿಂದ ಬಳಲುತ್ತಿದ್ದರು ಎನ್ನಲಾಗಿದ್ದು ಗುರುವಾರ ತಡರಾತ್ರಿ ಕಾನ್ಪುರದಲ್ಲಿ ನಿಧನ ಹೊಂದಿದ್ದಾರೆ. ಈ ವಿಷಯವನ್ನು ನಟಿಯ ತಂಡ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಬಹಿರಂಗಪಡಿಸಿದೆ. ಅದರಲ್ಲಿ ‘ನಮ್ಮ ಪ್ರೀತಿಯ ಪೂನಂ ಅವರನ್ನು ಗರ್ಭಕಂಠದ ಕ್ಯಾನ್ಸರ್‌ನಿಂದ ಕಳೆದುಕೊಂಡಿದ್ದೇವೆ ಎಂದು ಘೋಷಿಸಲು ನಮಗೆ ದುಃಖವಾಗಿದೆ ಎಂದು ಬರೆದುಕೊಂಡಿದ್ದಾರೆ.
Comments are closed.