ಮುಂಬೈ: ವಯೋ ಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಟಾಟಾ ಸಮೂಹ ಸಂಸ್ಥೆಗಳ ಮುಖ್ಯಸ್ಥ ರತನ್ ಟಾಟಾ (86 ವರ್ಷ) ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ತಡರಾತ್ರಿ ನಗರದ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ವಯೋ ಸಹಜ ಆರೋಗ್ಯ ಸಮಸ್ಯೆಗಳಿಂದ ರತನ್ ಟಾಟಾ ಬಳಲುತ್ತಿದ್ದರು. ರಕ್ತದೊತ್ತಡದಲ್ಲಿ ಕುಸಿತದ ಹಿನ್ನೆಲೆಯಲ್ಲಿ ತಪಾಸಣೆಗಾಗಿ ಸೋಮವಾರ ರತನ್ ಟಾಟಾ ಮುಂಬಯಿಯ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದರು. ಆಳವಾದ ದುಃಖ ಭಾವನೆಯೊಂದಿಗೆ ನಾವು ರತನ್ ನೇವಲ್ ಟಾಟಾ ಅವರಿಗೆ ವಿದಾಯ ಹೇಳುತ್ತೇವೆ. ಅವರ ಅಗಾಧ ಕೊಡುಗೆಗಳು ಟಾಟಾ ಗ್ರೂಪ್ ಅನ್ನು ಮಾತ್ರವಲ್ಲದೆ ನಮ್ಮ ರಾಷ್ಟ್ರವನ್ನು ರೂಪಿಸಿವೆ ಎಂದು ಟಾಟಾ ಸನ್ಸ್ ಅಧ್ಯಕ್ಷ ಎನ್. ಚಂದ್ರಶೇಖರನ್ ಹೇಳಿದರು.
ಎರಡು ದಿನಗಳ ಹಿಂದೆ ಅನಾರೋಗ್ಯದ ಕಾರಣಕ್ಕಾಗಿ ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದರೂ, ಬಳಿಕ ಈ ಬಗ್ಗೆ ಅವರೇ ಸ್ಪಷ್ಟೀಕರಣ ನೀಡಿದ್ದರು. ಆದರೆ, ಬುಧವಾರದ ವೇಳೆಗೆ ಮತ್ತೊಮ್ಮೆ ಗಂಭೀರ ಸ್ಥಿತಿಯಲ್ಲಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ದಾಖಲಾಗಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ತಡರಾತ್ರಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
Comments are closed.