Mumbai

ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್ ಅವರನ್ನು ಗುಂಡಿಕ್ಕಿ ಹತ್ಯೆ

Pinterest LinkedIn Tumblr

ಮುಂಬೈ: ನಗರದ ಬಾಂದ್ರಾ ಪ್ರದೇಶದಲ್ಲಿ ಎನ್‌ಸಿಪಿ ಅಜಿತ್ ಪವಾರ್ ಬಣದ ನಾಯಕ ಬಾಬಾ ಸಿದ್ದಿಕಿ ಮೇಲೆ ಶನಿವಾರ ರಾತ್ರಿ ಗುಂಡು ಹಾರಿಸಲಾಗಿದ್ದು, ಗುಂಡಿನ ದಾಳಿಯ ನಂತರ ಬಾಬಾ ಸಿದ್ದಿಕಿ ಅವರನ್ನು ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ವೈದ್ಯರು ಸಿದ್ದಿಕಿ ಮೃತಪಟ್ಟಿರುವುದಾಗಿ ಘೋಷಿಸಿದರು. ಬಾಬಾ ಸಿದ್ದಿಕಿ ಅವರ ಕಚೇರಿ ಬಳಿಯೇ ಗುಂಡು ಹಾರಿಸಲಾಗಿದೆ. ಪೊಲೀಸರು ಇದುವರೆಗೆ ಇಬ್ಬರು ಹಂತಕರನ್ನು ವಶಕ್ಕೆ ಪಡೆದಿದ್ದು, ಮತ್ತೋರ್ವನಿಗಾಗಿ ಶೋಧ ನಡೆಸುತ್ತಿರುವ ಬಗ್ಗೆ ವರದಿಯಾಗಿದೆ.

ಮೂಲಗಳ ಪ್ರಕಾರ 15 ದಿನಗಳ ಹಿಂದೆ ಬಾಬಾ ಸಿದ್ದಿಕಿಗೆ ಜೀವ ಬೆದರಿಕೆ ಬಂದಿತ್ತು. ಇದರ ಬೆನ್ನಲ್ಲೇ ಅವರನ್ನು ನಡುರಸ್ತೆಯಲ್ಲೇ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಹಾಗೂ ಹರಿಯಾಣ ಮೂಲದ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ.

ಮಹಾರಾಷ್ಟ್ರದ ರಾಜಕೀಯದಲ್ಲಿ ಬಾಬಾ ಸಿದ್ದಿಕಿ ದೊಡ್ಡ ಹೆಸರು. ಮಾಜಿ ಸಚಿವರಾಗಿರುವ ಅವರು ಮೂರು ಬಾರಿ ಶಾಸಕರಾಗಿದ್ದರು. ಬಾಂದ್ರಾ ಪೂರ್ವ ಭಾಗದಲ್ಲಿ ಬಾಬಾ ಸಿದ್ದಿಕಿ ಮೇಲೆ ಗುಂಡಿನ ದಾಳಿ ನಡೆಸಲಾಗಿದ್ದು, ನಿರ್ಮಲ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನೆಯ ಬಗ್ಗೆ ಮಾಹಿತಿ ಲಭಿಸಿದ ತಕ್ಷಣ ಮುಂಬೈ ಅಪರಾಧ ವಿಭಾಗದ ತಂಡಗಳು ಸ್ಥಳಕ್ಕೆ ಧಾವಿಸಿವೆ. ಈ ಪ್ರಕರಣದಲ್ಲಿ ಇಬ್ಬರು ಶೂಟರ್‌ಗಳನ್ನು ಬಂಧಿಸಲಾಗಿದೆ. ಶೂಟರ್‌ಗಳು ಸಿದ್ದಿಕಿ ಮೇಲೆ ಆರು ಸುತ್ತು ಗುಂಡು ಹಾರಿಸಿದ್ದು, ಮೂರು ಗುಂಡುಗಳು ಸಿದ್ದಿಕಿ ದೇಹ ಸೇರಿದ್ದವು ಎನ್ನಲಾಗಿದೆ.

Comments are closed.