ಮುಂಬೈ: ನೀಲಕಮಲ್ ಎಂಬ ಪ್ರಯಾಣಿಕ ಹಡಗಿಗೆ ನೌಕಾಪಡೆಯ ಬೋಟ್ ಡಿಕ್ಕಿ ಹೊಡೆದು 13 ಮಂದಿ ದಾರುಣ ಸಾವಿಗೀಡಾಗಿರುವ ಘಟನೆ ಮುಂಬೈ ಕರಾವಳಿಯಲ್ಲಿ ನಡೆದಿದೆ.
ಅವಘಡದಲ್ಲಿ 101 ಜನರನ್ನು ರಕ್ಷಿಸಲಾಗಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ತಿಳಿಸಿದ್ದಾರೆ. ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಮೃತರಲ್ಲಿ 10 ನಾಗರಿಕರು ಮತ್ತು ಮೂವರು ನೌಕಾಪಡೆ ಸಿಬ್ಬಂದಿ ಸೇರಿದ್ದಾರೆ ಎಂದು ಫಡ್ನವಿಸ್ ನಾಗ್ಪುರದಲ್ಲಿ ಸುದ್ದಿಗಾರರಿಗೆ ತಿಳಿಸಿದರು. ನೌಕಾಪಡೆಯ ಮಾಹಿತಿಯ ಪ್ರಕಾರ, ಬುಧವಾರ ರಾತ್ರಿ 7:30 ರ ಹೊತ್ತಿಗೆ ಸಾವಿನ ಸಂಖ್ಯೆ 13 ಕ್ಕೆ ಏರಿಕೆಯಾಗಿದೆ.
ನೀಲಕಮಲ್ ಹಡಗು ಮುಂಬೈ ಬಳಿಯ ಜನಪ್ರಿಯ ಪ್ರವಾಸಿ ತಾಣವಾದ ಎಲಿಫೆಂಟಾ ದ್ವೀಪಗಳಿಗೆ ತೆರಳುತ್ತಿದ್ದಾಗ ಸ್ಪೀಡ್ ಬೋಟ್ ಸಂಜೆ 4 ಗಂಟೆ ಸುಮಾರಿಗೆ ಡಿಕ್ಕಿ ಹೊಡೆದಿದೆ ಎಂದು ಫಡ್ನವಿಸ್ ಹೇಳಿದ್ದಾರೆ.
Comments are closed.